ಸೋಮವಾರಪೇಟೆ: ತಾಲ್ಲೂಕಿನ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ.

9ನೇ ದಿನವೂ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ವಸತಿಹೀನ ಬಡ ಕಾರ್ಮಿಕರ ಸಮಸ್ಯೆಯನ್ನು ಶಾಸಕರು ಕೇಳಬೇಕಿತ್ತು. ದುರಾದೃಷ್ಟಕರ ಯಾವುದೇ ಜನಪ್ರತಿನಿಧಿ ಇದುವರೆಗೆ ಧರಣಿನಿರತ ಬಡವರ ಗೋಳನ್ನು ಕೇಳಿಲ್ಲ ಎಂದು ಸಂಘಟನೆ ಅಧ್ಯಕ್ಷ ಕೆ.ಮೊಣ್ಣಪ್ಪ ಬೇಸರ ವ್ಯಕ್ತಪಡಿಸಿದರು.

‘ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧರಣಿ ನಿರತರ ಬೇಡಿಕೆ ಆಲಿಸುವ ಭರವಸೆ ಸಿಕ್ಕಿದೆ. ಸೂರಿಲ್ಲದ ಬಡವರಿಗೆ ಉಚಿತ ನಿವೇಶನ ನೀಡುವುದಕ್ಕೆ ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕು. ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸದಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಗಳಲ್ಲಿ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.

‘ಕಾನೂನಿನಂತೆ ವಸತಿ ರಹಿತರಿಗೆ ಸರ್ಕಾರಿ ಜಾಗದಲ್ಲಿ ಉಚಿತ ನಿವೇಶನ ನೀಡದಿದ್ದರೆ. ಮುಂದಿನ ದಿನಗಳಲ್ಲಿ ಪೈಸಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.