ಸೋಮವಾರಪೇಟೆ: ಇಲ್ಲಿನ ಮಹದೇಶ್ವರ ಬ್ಲಾಕ್ನಲ್ಲಿರುವ ಶ್ರೀ ಮುನೇಶ್ವರ ಮತ್ತು ಚಾಮುಂಡೇಶ್ವರಿ ದೇವಾಲಯದ ವಾರ್ಷಿಕ ಪೂಜೆ ಬುಧವಾರ ಶ್ರದ್ಧಾಭಕ್ತಿಯಿಂದ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.

ಬೆಳಿಗ್ಗೆಯಿಂದಲೇ ವಿವಿಧ ಪೂಜೆ, ಹೋಮ, ಹವನಗಳು ನಡೆದವು. ದುರ್ಗಾದೀಪ ನಮಸ್ಕಾರ ನಡೆಯಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಯಿತು.

ಇದೇ ಸಂದರ್ಭ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಡಾಕ್ಟರ್ ಆಫ್ ಮೆಡಿಸಿನ್(ಅಯುರ್ವೇದ)ನಲ್ಲಿ ಎರಡನೇ ರ್ಯಾಂಕ್ ಪಡೆದ ಡಾ.ಎನ್.ಎಂ. ಪಲ್ಲವಿ ಅವರನ್ನು ದೇವಾಲಯ ಸಮಿತಿಯಿಂದ ಸನ್ಮಾನಿಸಲಾಯಿತು. ಇವರು ಎಂ.ಡಿ. ಬ್ಲಾಕ್ ನಿವಾಸಿ, ನಲ್ಲುಲ್ಲಿ ಮೋಹನ್ ಮತ್ತು ಶೋಭ ಅವರ ಪುತ್ರಿ.

ದೇವಾಲಯ ಸಮಿತಿ ಅಧ್ಯಕ್ಷ ಸುರೇಶ್, ಗೌರವ ಅಧ್ಯಕ್ಷ ತಿಮ್ಮಶೆಟ್ಟಿ, ಕಾರ್ಯದರ್ಶಿ ಲೋಕೇಶ್, ಖಚಾಂಚಿ ಗೋವಿಂದ ಮತ್ತು ಸಮಿತಿ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-1302301307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.