ಸೋಮವಾರಪೇಟೆ: ಇಲ್ಲಿನ ಕಕ್ಕೆಹೊಳೆ ಬಳಿಯ ಮುತ್ತಪ್ಪಸ್ವಾಮಿ ದೇವಾಲಯದ ಜಾತ್ರೋತ್ಸವವ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಸೋಮವಾರ ಕಾರ್ಯಕ್ರಮಕ್ಕೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.

‘ಇಂತಹ ಕಾರ್ಯಕ್ರಮಗಳಿಂದ ಜನರು ಒಂದಾಗಿ ಸೇರಿ ಸಂಭ್ರಮಿಸುವುದರೊಂದಿಗೆ, ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯ’ ಎಂದು ಅವರು ಹೇಳಿದರು.

ಮಾಜಿ ಸಚಿವ ಅಪ್ಪಚ್ಚುರಂಜನ್, ದೇವಾಲಯ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್, ಉದ್ಯಮಿ ಬಿ.ಎಸ್. ಸುಂದರ್ ಮತ್ತು ಪದಾಧಿಕಾರಿಗಳು ಇದ್ದರು.

ಸಂಜೆ ಮುತ್ತಪ್ಪಸ್ವಾಮಿಯ ಉತ್ಸವ ಮೂರ್ತಿಯನ್ನು ಕೇರಳದ ಸಿಂಗಾರಿ ಮೇಳದೊಂದಿಗೆ ಕಳಶದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ನಂತರ ದೇವಾಲಯದ ಆವರಣದವರೆಗೂ ನಡೆಯಿತು. ರಾತ್ರಿ ಮುತ್ತಪ್ಪನ್ ದೇವರ ವೆಳ್ಳಾಟ ನಂತರ ವಿಷ್ಣುಮೂರ್ತಿ ದೇವರ ವೆಳ್ಳಾಟ, ಕರಿಗುಂಟ್ಟಿ ದೇವರು, ಭಗವತಿ ದೇವಿ, ರಕ್ತಚಾಮುಂಡಿ, ಪೊಟ್ಟನ್ ದೇವರ ವೆಳ್ಳಾಟ ರಾತ್ರಿ 11ರವರೆಗೂ ಜರುಗಿತು. ನಂತರ ರಾತ್ರಿ ದೇವರ ಕಳಿಕ್ಕಾಪಾಟ್ ನಡೆಯಿತು. ಆಗಮಿಸಿದ ಎಲ್ಲರಿಗೂ ಅನ್ನದಾನ ಕಾರ್ಯಕ್ರಮ ನಡೆಯಿತು.

ಅಯ್ಯಪ್ಪಸ್ವಾಮಿ ಮತ್ತು ಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ನೇತೃತ್ವದಲ್ಲಿ ಪೂಜಾ ಕಾರ್ಯ ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-27932844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.