ಸೋಮವಾರಪೇಟೆ: ಸರೋಜಿನ ಮಹಿಷಿ ವರದಿ ಜಾರಿಗೊಳಿಸಬೇಕು, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡಬೇಕು, ಆಶ್ರಯ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಪಟ್ಟಣದ ಕಕ್ಕೆಹೊಳೆ ಬಳಿಯಿಂದ ಪ್ರಮುಖ ರಸ್ತೆಗಳ ಮೂಲಕ ಜೇಸಿ ವೇದಿಕೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಬಳಿಕ ಜೇಸಿ ವೇದಿಕೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಮಾತನಾಡಿ, ‘ಅಕ್ರಮ ಬಾಂಗ್ಲಾ ವಲಸಿಗರು ಅಸ್ಸಾಮಿಗರ ಸೋಗಿನಲ್ಲಿ ನೆಲೆಸುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಕಾರ್ಮಿಕರ ಬದುಕು ಬೀದಿಗೆ ಬರುತ್ತಿದೆ. ಬೆಂಗಳೂರಿನಲ್ಲಿಯೇ ಬಾಂಗ್ಲಾ ದೇಶದವರಿಗೆ ಸರ್ಕಾರವೇ ಮನೆ ನೀಡಿದೆ. ಅಂದು ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದು, ಪ್ರವೀಣ್ ಶೆಟ್ಟಿ ಬಣದ ಕರವೇ ಮಾತ್ರ’ ಎಂದರು.

‘ವಲಸಿಗರು ಇತ್ತೀಚೆಗಷ್ಟೇ ಶಾಂತಳ್ಳಿಯಲ್ಲಿ ಆಟೊ ಚಾಲಕನಿಗೆ ತೀವ್ರ ಹಲ್ಲೆ ನಡೆಸಿದ್ದಾರೆ. ಅಸ್ಸಾಮಿಗರು ಬರುವುದಕ್ಕಿಂತ ಮುಂಚೆ ತೋಟಗಳಲ್ಲಿ ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಮಾಲೀಕರಿಗೆ ನಿಯತ್ತಾಗಿದ್ದರು. ಇದೀಗ ಅಸ್ಸಾಮಿಗರು ಮಾಲೀಕರು ಮೇಲೆಯೇ ಹಲ್ಲೆ ನಡೆಸುತ್ತಿದ್ದಾರೆ. ಎಲ್ಲೆಡೆ ತುಂಬಿದ್ದಾರೆ. ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ತೋಟದ ಮಾಲೀಕರಿಗೂ ಭದ್ರತೆ ಇರುವುದಿಲ್ಲ’ ಎಂದು ಎಚ್ಚರಿಸಿದರು.

ಕಾನೂನು ಸಲಹೆಗಾರ ಕಾಟ್ನಮನೆ ವಿಠಲ್ ಗೌಡ ಮಾತನಾಡಿ, ‘ಅಕ್ರಮ ಬಾಂಗ್ಲಾ ವಲಸಿಗರು ಕೇವಲ ಕೊಡಗಿನ ಸಮಸ್ಯೆಯಲ್ಲ. ಇಡೀ ಭಾರತ ದೇಶದ ಸಮಗ್ರತೆಯ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು. ಇತ್ತೀಚೆಗೆ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಿಂದ ಸಾಕಷ್ಟು ಮಂದಿ ನುಸುಳುಕೋರರು ಸಿಕ್ಕಿ ಬೀಳುತ್ತಿದ್ದಾರೆ. ಮತದಾರರ ಪಟ್ಟಿಯೊಂದಿಗೆ ಆಧಾರ್ ಕಾರ್ಡ್ ಸಹ ಪರಿಶೀಲಿಸಬೇಕು. ರಾಜ್ಯಮಟ್ಟದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು’ ಎಂದರು.

ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕಾಳಪ್ಪ ಮಾತನಾಡಿ, ‘ಪ್ರತಿಭಟನಾ ಸಭೆಗೆ ಅನುಮತಿ ಪಡೆಯಲು ತೆರಳಿದ ಸಂದರ್ಭ, ಬಾಂಗ್ಲಾದವರು ಎಲ್ಲಿದ್ದಾರೆ? ಎಂದು ಪೊಲೀಸ್ ಅಧಿಕಾರಿಯೊಬ್ಬರು ಕರವೇ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ. ನಾವೇ ಬಾಂಗ್ಲಾದವರನ್ನು ಪತ್ತೆ ಹಚ್ಚುವುದಾರೆ ಪೊಲೀಸ್ ವ್ಯವಸ್ಥೆ ಯಾಕೆ ಬೇಕು?. ಕರ್ನಾಟಕ ರಾಜ್ಯದಲ್ಲಿ 20 ಲಕ್ಷ ಬಾಂಗ್ಲಾ ವಲಸಿಗರಿದ್ದಾರೆ ಎಂಬ ಮಾಹಿತಿ ಪೊಲೀಸ್ ಇಲಾಖೆಗೆ ಸಿಕ್ಕಿದೆ. ಶಾಸಕಮಂತರ್ ಗೌಡ ಅವರು ಸಹ ಸದನದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ಯಾವ ಕ್ರಮಕೈಗೊಂಡಿದೆ ಎಂಬುದೂ ತಿಳಿಯಬೇಕು’ ಎಂದು ತಿಳಿಸಿದರು.

ಕಾರ್ಮಿಕ ಸಂಘಟನೆಯ ಮುಖಂಡ ಎಚ್.ಎಂ.ಸೋಮಪ್ಪ, ಅರೆ ಸೇನಾ ಪಡೆಯ ಜಿಲ್ಲಾಧ್ಯಕ್ಷ ರಮೇಶ್, ನಿರ್ವಾಣಪ್ಪ, ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಹೂವಯ್ಯ ಮಾಸ್ಟರ್, ಕರವೇ ಯುವ ಘಟಕದ ಅಧ್ಯಕ್ಷ ವಸಂತ್ ಆಚಾರ್ಯ, ತಾಲ್ಲೂಕು ಘಟಕದ ಅಧ್ಯಕ್ಷ ರೋಹಿತ್ ಗೌಡ, ನಗರ ಘಟಕದ ಅಧ್ಯಕ್ಷ ಬಿ.ಎಸ್.ಮಂಜುನಾಥ್, ಮಹಿಳಾ ಘಟಕದ ವೇದಾವತಿ, ಶೃತಿ, ಲತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.