ಸೋಮವಾರಪೇಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರ್ಫೇಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಮಾರಕವಾಗುತ್ತಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ನಿರ್ದೇಶಕ ಸಿ.ಕೆ. ಮಲ್ಲಪ್ಪ ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದ ಸುಗ್ಗಿ ಕಟ್ಟೆಯಲ್ಲಿ ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ವತಿಯಿಂದ ಈಚೆಗೆ ನಡೆದ ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಸಭೆಯಲ್ಲಿ ಅವರು ಮಾತನಾಡಿದರು.

ಕಾಫಿ ಬೆಳೆಗಾರರು ಇಂದು ಹಲವು ಸಂಕಷ್ಟಗಳೊಂದಿಗೆ ಕೃಷಿ ನಡೆಸುತ್ತಿದ್ದಾರೆ. ಅವರು ಬ್ಯಾಂಕುಗಳಿಂದ ಪಡೆದಿರುವ ಸಾಲವನ್ನು ವಿವಿಧ ಕಾರಣಗಳಿಂದ ಸಮಯಕ್ಕೆ ಸರಿಯಾಗಿ ತೀರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಹವಾಮಾನ ವೈಪರೀತ್ಯ, ಬೆಲೆ ಕುಸಿತ, ಕಾಡು ಪ್ರಾಣಿಗಳ ಹಾವಳಿ, ಅಕಾಲಿಕ ಮಳೆ, ಫಸಲು ಹಾನಿ, ಬೆಲೆ ಕುಸಿತ ಮುಂತಾದ ಸಮಸ್ಯೆಗಳು ಬೆಳೆಗಾರರ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸುತ್ತಿವೆ. ಈ ಸಂದರ್ಭದಲ್ಲಿ ಸರ್ಫೇಸಿ ಕಾಯ್ದೆಯಡಿ ಬ್ಯಾಂಕುಗಳು ನೇರವಾಗಿ ಕಾಫಿ ತೋಟಗಳನ್ನು ಹರಾಜು ಮಾಡಲು ನೋಟಿಸ್ ನೀಡುತ್ತಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಫಿಯನು ಕೃಷಿ ವಲಯಕ್ಕೆ ಸೇರಿಸಬೇಕು. ಈ ಬಗ್ಗೆ ಜನಪ್ರತಿನಿಧಿಗಳು ಹೋರಾಟ ರೂಪಿಸಬೇಕು. ಬೆಳೆಗಾರರಿಗೆ ಸೂಕ್ತವಾದ ರಿಯಾಯಿತಿ ನೀಡದೇ ನೇರವಾಗಿ ಹರಾಜು ಪ್ರಕ್ರಿಯೆಗೆ ಮುಂದಾಗುವುದು ನ್ಯಾಯಸಮ್ಮತವಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಬೆಳೆಗಾರರ ಪರವಾಗಿ ನಿಂತು ಸರ್ಫೇಸಿ ಕಾಯ್ದೆಯ ಅನ್ವಯಕ್ಕೆ ಮಿತಿ ವಿಧಿಸಬೇಕು ಎಂದು ಆಗ್ರಹಿಸಿದರು.

ಕಾಫಿ ತೋಟಗಳಿಗೆ ಕಾಡಾನೆಗಳು, ಕಾಡುಕೋಣಗಳು ಸೇರಿ ಹಲವು ಪ್ರಾಣಿಗಳಿ ಹಾನಿ ಉಂಟುಮಾಡುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಸಿ ಮತ್ತು ಡಿ ಯ ಜಾಗದ ಸಮಸ್ಯೆ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎಂ. ಲವ ಮಾತನಾಡಿ, ಬೆಳೆಗಾರರು ಸಂಘದ ಬಲ ವರ್ಧನೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಬೇಕು. ಸಂಘ ಬಲಿಷ್ಠವಾದಾಗ ಮಾತ್ರ ಸರ್ಕಾರದ ಗಮನ ಸೆಳೆದು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.

ಸಂಘದ ಕಾರ್ಯದರ್ಶಿ ಎಂ.ಯಂ. ಮನೋಹರ್, ನಿರ್ದೇಶಕರಾದ ಅನಂತರಾಮ್, ದಳವಾಯಿ ರಾಜು, ಯಂ.ಬಿ. ರಾಜಪ್ಪ, ಮಾಚಯ್ಯ, ನಿಂಗಪ್ಪ, ತೋಳೂರು ಶೆಟ್ಟಳ್ಳಿ ಗ್ರಾಮ ಮಂಡಳಿ ಅಧ್ಯಕ್ಷ ರಾಜಗೋಪಾಲ್, ಕಾರ್ಯದರ್ಶಿ ಮಹೇಶ್ ಇದ್ದರು.

ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸಂಘದ ಮೂಲಕ ಹೋರಾಟ ನಡೆಸಲು ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರ ಮತ್ತು ಬ್ಯಾಂಕುಗಳು ಬೆಳೆಗಾರರ ಸಂಕಷ್ಟವನ್ನು ಮನಗಂಡು ಮಾನವೀಯ ದೃಷ್ಟಿಕೋನದಿಂದ ನಡೆದುಕೊಳ್ಳಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-644180010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.