ಸೋಮವಾರಪೇಟೆ: ಬೀದಿ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಟ್ಟಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಹಾಗೂ ಅವುಗಳ ಸುರಕ್ಷತೆಗಾಗಿ ಪಟ್ಟಣ ಪಂಚಾಯಿತಿ ವತಿಯಿಂದ ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸಾ ಕಾರ್ಯಕ್ಕೆ ಚಾಲನೆ ನೀಡಿ, ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ವತಿಯಿಂದ ಪಶುವೈದ್ಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಬೀದಿ ನಾಯಿಗಳ ಶಸ್ತ್ರಚಿಕಿತ್ಸಾ ಕೊಠಡಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿಯೇ ಪ್ರಥಮವಾಗಿ ಈ ಕಾರ್ಯಕ್ಕೆ ಚಾಲನೆ ನಿಡಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶದಂತೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿ, ಅಗತ್ಯ ಆರೈಕೆ ಬಳಿಕ ಮತ್ತೆ ಅದೇ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗುವುದು. ಜನರು ಇದಕ್ಕೆ ಸಹಕರಿಸಬೇಕೆಂದು ತಿಳಿಸಿದರು.

ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜ್ ದೊಡ್ಡಮನಿ ಮಾತನಾಡಿ, ರೇಬಿಸ್ ಮುಕ್ತ ಮಾಡುವ ನಿಟ್ಟಿನಲ್ಲಿ ದೇಶದ ಪ್ರಮುಖ ಕಾರ್ಯಕ್ರಮ ಮಾಡಲಾಗುತ್ತಿದೆ. ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ಬೀದಿನಾಯಿಗಳ ಉಪಟಳ ಹೆಚ್ಚಾಗುತ್ತಿರುವುದರಿಂದ, ಬೀದಿನಾಯಿಗಳನ್ನು ನಿಯಂತ್ರಿಸಬೇಕೆಂದು ಕೋರ್ಟ್ ಆದೇಶ ನೀಡಿದೆ. ಅದರಂತೆ ನಾಯಿಗಳನ್ನು ನಿಯಂತ್ರಿಸಲು ಸರ್ಕಾರದ ಮಾರ್ಗಸೂಚಿಯಂತೆ ಎನ್ಜಿಒಗಳ ಮೂಲಕ ನಾಯಿಗಳನ್ನು ಹಿಡಿದು ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಗಂಡು ನಾಯಿಗಳಿಗೆ ಮೂರು ದಿನ ಹಾಗೂ ಹೆಣ್ಣು ನಾಯಿಗಳಿಗೆ ಐದು ದಿನಗಳ ವೈದ್ಯಕೀಯ ಆರೈಕೆ ನೀಡಿದ ಬಳಿಕ ಅವುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇದೇ ವೇಳೆ ಮನೆಗಳಲ್ಲಿ ಸಾಕು ನಾಯಿಗಳನ್ನು ಹೊಂದಿರುವವರು ಕೂಡ ಉಚಿತವಾಗಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಸೌಲಭ್ಯವನ್ನು ಪಡೆಯಬಹುದು ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಎಂಜಿನಿಯರ್ ಹೇಮಂತ್ ಕುಮಾರ್, ಆರೋಗ್ಯ ನಿರೀಕ್ಷಕ ಜಾಸಿಂ ಖಾನ್, ದಫೇದಾರ ಆದಿಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-51-886683973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.