ಸೋಮವಾರಪೇಟೆ: ವಿದ್ಯಾರ್ಥಿಗಳು ಪಠ್ಯಕ್ಕೆ ಮತ್ತು ಅಂಕಗಳಿಗೆ ಮಾತ್ರ ಸೀಮಿತವಾಗದೆ, ಮೌಲ್ಯಯುತ ಜೀವನ ನಡೆಸಲು ತಮ್ಮ ಶಿಕ್ಷಣದ ಅವಧಿಯಲ್ಲಿಯೇ ಕಲಿಯಲು ಮುಂದಾಬೇಕೆಂದು ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ತಿಳಿಸಿದರು.

ಸಮೀಪದ ಯಡೂರು ಗ್ರಾಮದ ಬಿ.ಟಿ. ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಇಂದು ಸಾಕಷ್ಟು ಬದಲಾವಣೆಯಾಗಿದೆ. ತಂತ್ರಜ್ಞಾನ ಮುಂದುವರಿದಿರುವುದರಿಂದ ಯಾವುದೇ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡರು, ಕಲಿಕೆ ಸುಗಮವಾಗಿದೆ. ಸಾಕಷ್ಟು ಅಧ್ಯಯನ ಸಾಮಗ್ರಿಗಳು ಅಂತರ್ಜಾಲದ ಮೂಲಕ ಲಭ್ಯವಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ಮಾಹಿತಿ ಕ್ರೋಢೀಕರಣಕ್ಕೆ, ಅಂಕಗಳಿಗೆ ಸೀಮಿತವಾಗದೆ, ಎಲ್ಲರೂ ಕೌಶಲಗಳನ್ನು ರೂಢಿಸಿಕೊಳ್ಳಬೇಕಿದೆ. ಇದರೊಂದಿಗೆ ಮಾನವೀಯ ಮೌಲ್ಯಗಳಿಗೆ ಬೆಲೆ ಕೊಟ್ಟು, ಅರ್ಥಪೂರ್ಣವಾದ ಬದುಕು ನಡೆಸಲು ಮುಂದಾಗಬೇಕು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಉಲ್ಲಾಸ್ ಕರಡಿ ಕೊಪ್ಪ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಇಂದಿನ ಮಕ್ಕಳಿಗೆ ಎಲ್ಲ ರೀತಿಯ ಮೂಲಸೌಕರ್ಯಗಳು ಲಭ್ಯವಿದ್ದು ಅನುಭವಿ ಉಪನ್ಯಾಸಕರಿದ್ದಾರೆ. ಇವುಗಳನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಬಿ.ಡಿ. ಹರ್ಷ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಮೂರನೇ ಬಾರಿಗೆ ನ್ಯಾಕ್ ಮೌಲ್ಯಮಾಪನಕ್ಕೆ ಒಳಗಾಗಿರುವ ಎರಡೇ ಕಾಲೇಜುಗಳಲ್ಲಿ ಬಿಟಿಸಿಜಿ ಕಾಲೇಜು ಸಹ ಒಂದು. ಇದು ರೂಸಾ ಅನುದಾನಿತ ಕಾಲೇಜು ಸಹ ಆಗಿದ್ದು, ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಕಾಲೇಜಿನಲ್ಲೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾತಿ ಹೊಂದಿ ಇಲ್ಲಿನ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಂ.ಎಂ. ಸುನಿತಾ ಅವರು ಬಿಕಾಂ ವಿದ್ಯಾರ್ಥಿಗಳಿಗೆ ರಚಿಸಿರುವ ಪಠ್ಯಪುಸ್ತಕವನ್ನು ಇದೇ ಸಂದರ್ಭ ಬಿಡುಗಡೆ ಮಾಡಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸುಶೀಲ ಹಾನಗಲ್, ಸುರೇಂದ್ರ ಬಳಗುಂದ, ವೀರಭದ್ರಪ್ಪ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೋಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1043022430

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.