ಸೋಮವಾರಪೇಟೆ (ಕೊಡಗು): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಳಿನಿ ಗಣೇಶ್ (57) ಅವರು ಕೋವಿಡ್ನಿಂದ ಬುಧವಾರ ಮೃತಪಟ್ಟಿದ್ದಾರೆ.

ಶೀತ, ಕೆಮ್ಮಿನಿಂದ ಬಳಲುತ್ತಿದ್ದ ಅವರು, ಸೋಮವಾರ ತೀವ್ರ ಉಸಿರಾಟದ ತೊಂದರೆಗೆ ಒಳಗಾಗಿದ್ದರು. ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಉಸಿರಾಟದ ತೊಂದರೆ ಜತೆಗೆ ಹೃದಯಾಘಾತವೂ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ಐದು ಬಾರಿ ಆಯ್ಕೆಯಾಗಿದ್ದರು. 1993 ಹಾಗೂ 2010ರಲ್ಲಿ ಎರಡು ಬಾರಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 2008ರ ಅವಧಿಯಲ್ಲೂ ಅಧ್ಯಕ್ಷರಾಗಿದ್ದರು. ನವೆಂಬರ್ನಲ್ಲಿ ಎರಡನೇ ಬಾರಿಗೆ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದರು.

ಸೋಮವಾರಪೇಟೆ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷೆಯಾಗಿ, ಮಹಿಳಾ ಸಮಾಜ, ಮಹಿಳಾ ಬ್ಯಾಂಕ್ ಅಧ್ಯಕ್ಷೆಯಾಗಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನಿರ್ದೇಶಕರಾಗಿ, ಸಹಕಾರ ಬ್ಯಾಂಕ್ ನಿರ್ದೇಶಕಿಯಾಗಿ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿಯೂ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.