ಸೋಮವಾರಪೇಟೆ: ಮಹಿಳೆಯರು ಕುಟುಂಬದ ಆರೋಗ್ಯದೊಂದಿಗೆ ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು. ಸೂಕ್ತ ಸಮಯದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಇನ್ನರ್ ವ್ಹೀಲ್ ಕ್ಲಬ್ ಸೋಮವಾರಪೇಟೆ ಗೋಲ್ಡ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಹೇಳಿದರು.

ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಪಟ್ಟಣದ ಮಹಿಳಾ ಸಮಾಜ ಭವನದಲ್ಲಿ ಭಾನುವಾರ ನಡೆದ ಆರೋಗ್ಯ ಜಾಗೃತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿಗೂ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಕುರಿತು ಸಾಕಷ್ಟು ಅರಿವಿನ ಕೊರತೆಯಿದೆ. ಎಲ್ಲ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ತಡೆಗಟ್ಟಬಹುದಾದ ರೋಗವಾಗಿರುವುದರಿಂದ, ತಪಾಸಣೆಗೊಳಪಡುವುದು ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಮುಖ್ಯವಾಗಿದೆ. ಈಗ ಸರ್ಕಾರವೇ ಈ ಲಸಿಕೆಯನ್ನು ಉಚಿತವಾಗಿ ನೀಡುತ್ತಿರುವುದರಿಂದ ಸಾಮಾನ್ಯ ಜನರು ಸಹ ಸುಲಭವಾಗಿ ಇದರ ಪ್ರಯೋಜನ ಪಡೆಯಬಹುದು ಎಂದು ಅವರು ತಿಳಿಸಿದರು.

ಸ್ತ್ರೀರೋಗ ತಜ್ಞೆ ವೈದ್ಯೆ ಡಾ. ಇಮಾನಿ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಸಮಗ್ರ ಮಾಹಿತಿ ನೀಡಿ, ಆರಂಭಿಕ ಹಂತದಲ್ಲಿ ಯಾವುದೇ ಸ್ಪಷ್ಟ ಲಕ್ಷಣಗಳು ಕಾಣಿಸಿಕೊಳ್ಳದ ಕಾರಣ, ನಿಯಮಿತ ಆರೋಗ್ಯ ತಪಾಸಣೆ ಮತ್ತು ರೋಗಪತ್ತೆ ಹಚ್ಚಲು ಪರೀಕ್ಷೆಗೊಳಪಟ್ಟು, ರೋಗ ಲಕ್ಷಣ ಕಂಡುಬಂದಲ್ಲಿ ಸಂಬಂಧಿಸಿದ ವೈದ್ಯರೊಂದಿಗೆ ಚಿಕಿತ್ಸೆ ಪಡೆಯುವುದು ಅತ್ಯಂತ ಅಗತ್ಯವಾಗಿವೆ. 13ರಿಂದ 15 ವರ್ಷದೊಳಗಿನ ಪ್ರತಿ ಹೆಣ್ಣುಮಕ್ಕಳು ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಲಸಿಕೆ ಪಡೆಯಬಹುದು ಎಂದು ಹೇಳಿದರು.

ತ್ವಚೆ ಮತ್ತು ಕೂದಲಿನ ಆರೈಕೆ ಬಗ್ಗೆ ಡಾ.ವರ್ಷ ಮಾಹಿತಿ ನೀಡಿ, ಪ್ರತಿ ದಿನ ಒಂದಷ್ಟು ಸಮಯ ವ್ಯಾಯಾಮಕ್ಕೆ ಮೀಸಲಿಡಬೇಕು. ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಸರಿಯಾಗಿ ನಿದ್ರಿಸಬೇಕು ಎಂದು ತಿಳಿಸಿದರು.

ಕ್ಲಬ್ ಕಾರ್ಯದರ್ಶಿ ಸುವಿನಾ ಕೃಪಾಲ್, ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ರೋಟರಿ ಸಂಸ್ಥೆ ಅಧ್ಯಕ್ಷೆ ವೀಣಾ ಮನೋಹರ್, ಜೆಸಿಐ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಇನ್ನರ್ ವ್ಹೀಲ್ ಮಾಜಿ ಅಧ್ಯಕ್ಷೆ ಕವಿತಾ ವಿರೂಪಾಕ್ಷ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-909458116

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.