ಸೋಮವಾರಪೇಟೆ: ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಗೇಟ್ ಸಮೀಪ ಬೃಹತ್ ಗಾತ್ರದ ಹೆಬ್ಬಾವೊಂದು ರಸ್ತೆ ದಾಟುತ್ತಿರುವ ಘಟನೆ ಗುರುವಾರ ತಡರಾತ್ರಿ ಕಂಡುಬಂದಿದೆ.

ರಾತ್ರಿ 9ರ ಸಮಯದಲ್ಲಿ ಯಡವಾರೆ ಗ್ರಾಮದ ನಿವಾಸಿ ಮಚ್ಚಂಡ ಪ್ರಕಾಶ್ ಬೆಳ್ಳಿಯಪ್ಪ ಕುಶಾಲನಗರದಿಂದ ತಮ್ಮ ಮನೆಗೆ ಹಿಂತಿರುಗುತ್ತಿದ್ದ ವೇಳೆಗೆ ರಸ್ತೆ ದಾಟುತ್ತಿದ್ದ ಸುಮಾರು 13 ಅಡಿಗೂ ಹೆಚ್ಚು ಉದ್ದದ ಹೆಬ್ಬಾವನ್ನು ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಯಡವನಾಡು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಇಷ್ಟು ದೊಡ್ಡ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಜಾನುವಾರುಗಳನ್ನು ಮೇಯಿಸುವವರು ಹಾಗೂ ಸಂಚರಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹಾಗೂ ಹಸು, ಕುರಿಗಳನ್ನು ಮೇಯಿಸಲು ಅರಣ್ಯ ಅಂಚಿನ ಭಾಗಗಳಿಗೆ ತೆರಳುವವರು ಜಾಗ್ರತೆಯಿಂದ ಇರಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-51-1258927231

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.