ಸೋಮವಾರಪೇಟೆ: ಸಮೀಪದ ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಸಮಿತಿ ಅಧ್ಯಕ್ಷ ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಆಲಿಸಿದ ಮಾನ್ಯ ಶಾಸಕರು, ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೊರತೆ ನೀಗಲು, ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ತಿಗಳ ದಾಖಲಾತಿಯನ್ನು ಮತ್ತಷ್ಟು ಹೆಚ್ಚು ಮಾಡಲು ಇರುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆಗೆ ಅನುಕೂಲವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾಂಶುಪಾಲರು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು.

ಕಾಲೇಜಿನ ಕಟ್ಟಡಕ್ಕೆ ಬಣ್ಣ ಬಳಿಯುವುದು, ಕಾಲೇಜು ಆವರಣ ಅಲಂಕಾರಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಪ್ರಾಂಶುಪಾಲ ಬಿ.ಡಿ.ಹರ್ಷ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು,ಬೋಧಕ ಬೋಧಕೇತರ ವರ್ಗದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-51-1425760684

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.