ಸೋಮವಾರಪೇಟೆ: ಸಮಾಜದಲ್ಲಿ ಯುವ ಜನರು ವ್ಯಸನಗಳಿಗೆ ಬಲಿಯಾಗುವುದರೊಂದಿಗೆ, ಸಮಾಜಕ್ಕೆ ಮಾರಕವಾಗುತ್ತಿರುವುದು ನಮ್ಮ ದುರದೃಷ್ಟ ಎಂದು ಜಿಲ್ಲಾ ಜನಾಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಅಭಿಪ್ರಾಯಿಸಿದರು.

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಮಂಗಳವಾರ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಧೂಮಪಾನದಿಂದ ಕ್ಯಾನ್ಸರ್, ಹೃದಯ ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಅನೇಕ ಗಂಭೀರ ಕಾಯಿಲೆಗಳು ಉಂಟಾಗುತ್ತವೆ. ಸಿಗರೇಟ್, ಬೀಡಿ, ಗುಟ್ಕಾ, ಪಾನ್ ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳು ವ್ಯಕ್ತಿಯ ಆರೋಗ್ಯಕ್ಕೆ ಮಾತ್ರವಲ್ಲ, ಕುಟುಂಬ ಮತ್ತು ಸಮಾಜಕ್ಕೂ ಹಾನಿಕಾರಕವಾಗಿವೆ, ನಮ್ಮ ದೇಹದ ಆರೋಗ್ಯ ಜೊತೆಗೆ ಪರಿಸರ ಆರೋಗ್ಯ ಕಾಪಾಡಿಕೊಳ್ಳಿ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜನಾಜಾಗೃತಿ ವೇದಿಕೆ ಜನಜಾಗೃತಿ ವೇದಿಕೆ ಸದಸ್ಯ ಸೋಮೇಶ್, ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ಈ ದಿನವನ್ನು ಡಬ್ಲ್ಯುಎಚ್ಒ 1987ರಲ್ಲಿ ಪ್ರಾರಂಭಿಸಿತು. ತಂಬಾಕು ಬಳಕೆಯಿಂದ ಉಂಟಾಗುವ ಆರೋಗ್ಯ ಹಾನಿ, ಆರ್ಥಿಕ ನಷ್ಟ ಮತ್ತು ಸಾಮಾಜಿಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕಿನ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮಾತನಾಡಿ, ಸ್ವಚ್ಛ ಪರಿಸರವನ್ನು ಸಮಾಜಕ್ಕೆ ಮತ್ತು ಮುಂದಿನ ಪೀಳಿಗೆಗೆ ಉಳಿಸಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಶಿಕ್ಷಣದ ಅವಧಿಯಲ್ಲಿ ಆದರ್ಶ ವ್ಯಕ್ತಿತ್ವ, ಗುಣ, ನಡತೆಗಳನ್ನು ಬೆಳೆಸಿಕೊಳ್ಳಬೇಕು. ಸಮಯಕ್ಕೆ ಹೆಚ್ಚು ಮಹತ್ವ ನೀಡುವುದರೊಂದಿಗೆ, ತಂದೆ ತಾಯಿಗೆ ಉತ್ತಮ ಮಕ್ಕಳಾಗಿ, ಶಾಲೆಗೆ ಆದರ್ಶ ವಿದ್ಯಾರ್ಥಿಗಳಾಗಿರಬೇಕು ಎಂದು ಕಿವಿಮಾತು ಹೇಳಿದರು.

ಜನಜಾಗೃತಿ ವೇದಿಕೆ ಸದಸ್ಯರಾದ ಸುರೇಶ, ಬೆಳ್ಳಿಯಪ್ಪ, ಕಾಲೇಜಿನ ಪ್ರಾಂಶುಪಾಲರಾದ ಬೆಳ್ಳಿಯಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-30591198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.