ಸೋಮವಾರಪೇಟೆ: ‘ಜಿಲ್ಲೆಯಲ್ಲಿ ಗುಡ್ಡಗಾಡು ಪ್ರದೇಶ ಇರುವುದರಿಂದ ಅಗ್ನಿಶಾಮಕ ಠಾಣೆಯವರು ಎಲ್ಲೆಡೆ ಸಂಚರಿಸುವಂತಿರುವ ಹೈಟೆಕ್ ವಾಹನಗಳನ್ನು ಖರೀದಿಸಲು ಮುಂದಾಗಬೇಕು’ ಎಂದು ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಇಲ್ಲಿನ ಆರ್ಎಂಸಿ ಮಾರುಕಟ್ಟೆ ಆವರಣದಲ್ಲಿ ₹ 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಗ್ನಿಶಾಮಕ ಠಾಣಾ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಬೆಂಕಿ ಅನಾಹುತ ಸಂಭವಿಸಿದ ಸಂದರ್ಭ ಸೂಕ್ತ ಸಮಯದಲ್ಲಿ ಸ್ಥಳಕ್ಕೆ ತಲುಪಿಸಲು ಸುಸಜ್ಜಿತ ವಾಹನಗಳು ಬೇಕಾಗಿವೆ. ಈ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಲಾಗುವುದು. ಅಲ್ಲದೆ ಅಗ್ನಿಶಾಮಕ ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಅನುದಾನಕ್ಕೆ ಮನವಿ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ನಾಡಿನಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವ ಇಲಾಖೆಗಳಲ್ಲಿ ಅಗ್ನಿಶಾಮಕ ಠಾಣೆಯೂ ಒಂದಾಗಿದೆ. ಮುಂದಿನ ದಿನಗಳಲ್ಲಿ ಬೇಸಿಗೆ ಬಿರುಸುಗೊಳ್ಳುವುದರಿಂದ, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಠಾಣೆಯವರು ಇಂದಿನಿಂದಲೇ ಮುನ್ನೆಚ್ಚರಿಕೆ ವಹಿಸಿ ಅವಘಡಗಳು ನಡೆಯದ ಹಾಗೆ ಕ್ರಮ ತೆಗೆದುಕೊಳ್ಳಿ, ಯಾವುದೇ ಭಾಗದಿಂದ ಅವಘಡಗಳು ಸಂಭವಿಸಿದ ಮಾಹಿತಿ ಸಿಕ್ಕ ತಕ್ಷಣ ಕಾರ್ಯೋನ್ಮುಖರಾಗಿ. ಜಿಲ್ಲೆಯಲ್ಲಿ ಸ್ಥಳೀಯರು ಹೆಚ್ಚಿನ ಸಹಕಾರ ನೀಡುತ್ತಿರುವುದರಿಂದ, ಅವರ ಸಹಕಾರವನ್ನು ಪಡೆದುಕೊಳ್ಳಿ’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಚೌಡ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನತೀಶ್ ಮಂದಣ್ಣ, ಸದಸ್ಯ ಚೇತನ್, ಮೈಸೂರು ಪ್ರಾಂತ್ಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಪ್ರಾದೇಶಿಕ ಅಧಿಕಾರಿ ಪಿ.ಚಂದನ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ರಾಜೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.