ವಿರಾಜಪೇಟೆ: ಪಟ್ಟಣದ ಮಲೆತಿರಿಕೆ ಬೆಟ್ಟದಲ್ಲಿರುವ ಶನೀಶ್ವರ ದೇವಸ್ಥಾನದಲ್ಲಿ ಶ್ರಾವಣ ಮಹೋತ್ಸವದ ಅಂಗವಾಗಿ ಶನಿವಾರದಂದು ವಿಶೇಷ ಪೂಜೆ ನಡೆಯಿತು.
ಶ್ರಾವಣ ಶನಿವಾರದ ಅಂಗವಾಗಿ ಬೆಳಿಗ್ಗೆಯಿಂದಲೇ ವಿಶೇಷ ಧಾರ್ಮಿಕ ವಿಧಾನಗಳನ್ನು ನೆರವರಿಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆದ ನಂತರ ಸಂಜೆ ವಾದ್ಯಗೋಷ್ಠಿಯೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು.
ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ಸಾಕಷ್ಟು ಜನ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.