ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಉತ್ಸವ ಮೂರ್ತಿಗೆ ಅಪಮಾನ, ಕ್ರಮಕ್ಕೆ ಆಗ್ರಹ

Published 2 ಜನವರಿ 2024, 7:23 IST
Last Updated 2 ಜನವರಿ 2024, 7:23 IST
ಅಕ್ಷರ ಗಾತ್ರ

ಸೋಮವಾರಪೇಟೆ: ಮೈಸೂರಿನ ನಂಜನಗೂಡು  ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಸೋಮವಾರ ತಾಲ್ಲೂಕು ಕಚೇರಿಯ ಶಿರಸ್ತೇದಾರ್‌ ರಮೇಶ್ ಅವರ ಮೂಲಕ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಿತು.

‘ಮಾರ್ಗಶಿರ ಹುಣ್ಣಿಮೆಯಂದು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ ಅಂಧಕಾಸುರನ ಸಂಹಾರ ಧಾರ್ಮಿಕ ಕಾರ್ಯಕ್ರಮವನ್ನು ನೆರೆವೇರಿಸುವ ಸಂದರ್ಭ, ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ.  ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಹಾಸಂಘ ಮುಖ್ಯಮಂತ್ರಿ ಮನವಿ ಸಲ್ಲಿಸಿದೆ.

ಈ ಉತ್ಸವವು ಅನಾದಿಕಾಲದಿಂದ ನಡೆದುಕೊಂಡು ಬಂದಿದೆ. ಆದರೆ, ಈ ವರ್ಷ ಕೆಲವು ದುಷ್ಕರ್ಮಿಗಳು ಪೂರ್ವನಿಯೋಜಿತ ಷಡ್ಯಂತ್ರ್ಯದಂತೆ ಉತ್ಸವದಲ್ಲಿ ದೊಂಬಿ, ಗಲಾಟೆ ಮಾಡಿದ್ದಾರೆ. ಶ್ರೀ ನಂಜುಂಡೇಶ್ವರ ದೇವರಿಗೆ ಧಿಕ್ಕಾರ ಕೂಗಿ, ಉತ್ಸವ ಆಚರಣೆಗೆ ಭಂಗ ತರುವ ಮೂಲಕ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡುವುದರೊಂದಿಗೆ ಉತ್ಸವ ಮೂರ್ತಿಯನ್ನು ಅಪವಿತ್ರ ಮಾಡಿದ್ದಾರೆ ಎಂದು ವಿವರಿಸಿದ್ದಾರೆ. 

‘ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಭಕ್ತರು ಮತ್ತು ಸ್ಥಳಿಯರು ಸ್ವಯಂಪ್ರೇರಿತರಾಗಿ ಶಾಂತಿಯುತ ಪ್ರತಿಭಟನೆ ಮಾಡಿದ್ದರೂ, ಪೋಲೀಸರು ಆರೋಪಿಗಳನ್ನು ಬಂಧಿಸುವ ಬದಲು ಶಾಂತಿಯುತ ಪ್ರತಿಭಟನೆ ಮಾಡಿದ ಭಕ್ತರ ವಿರುದ್ಧ ಪ್ರಕರಣ ದೂರು ದಾಖಲು ಮಾಡಿರುವುದು ಖಂಡನೀಯ. ಸೂಕ್ತ ಕ್ರಮ ಜರುಗಿಸಬೇಕು’ ಎಂದು  ಮಹಾಸಂಘ ಆಗ್ರಹಿಸಿದೆ.

ಹಿಂದೂ ವಿರೋಧಿಗಳು ಶ್ರೀಕಂಠೇಶ್ವರ ದೇವರ ಬಗ್ಗೆ ಅತ್ಯಂತ ಕೆಟ್ಟದಾಗಿ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಾಕಿ ಅಪಮಾನ ಮಾಡಿದ್ದಾರೆ. ಅವರ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕೆಂದು ವಿನಂತಿಸಿದ್ದಾರೆ.
 
ಅರ್ಚಕರಾದ ಪಿ.ಎನ್. ಪ್ರಸಾದ್, ಮೋಹನ್ ಮೂರ್ತಿ, ತಾರಾಕುಮಾರ್, ಬಿ.ಜಿ. ರವಿ. ಎಚ್.ಆರ್. ನವೀನ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT