ಈ ಕುರಿತು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ಪೂರ್ವಸಿದ್ಧತಾ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.

ಮುಖ್ಯವಾಗಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಷಷ್ಟ ನಿರ್ದೇಶನ ನೀಡಿದರು.

ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಶೇಕಡಾವಾರು ಉತ್ತೀರ್ಣದ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದು ಎಂದರು.

ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ‘ಬೇಸ್ಮೆಂಟ್’ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು ಮಾತ್ರವಲ್ಲ, ಸಿಸಿಟಿವಿ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ಅದಕ್ಕಾಗಿ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಲೋಪಕಂಡು ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಮಾತನಾಡಿ, ‘ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ’ ಎಂದು ತಿಳಿಸಿದರು.

ಇವರಲ್ಲಿ ಬಾಲಕರು 3,049, ಬಾಲಕಿಯರು 3,134 ಇದ್ದಾರೆ. 399 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ ಎಂದರು.

ಜಿಲ್ಲೆಯ 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕುಗಳನ್ನು ತಲಾ 8, ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಕುಡಿಯುವ ನೀರಿನ ಸೌಲಭ್ಯ, ಬೆಳಕಿನ ವ್ಯವಸ್ಥೆ, ಶೌಚಾಲಯ, ಶುಶ್ರೂಷಕರ ನೇಮಕ, ಪೊಲೀಸರ ನಿಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಅಗತ್ಯ ಕ್ರಮವಹಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ‘ವಿದ್ಯಾರ್ಥಿಗಳು ಶ್ರಮಪಟ್ಟು ಓದಿರುತ್ತಾರೆ. ಅವರಿಗೆ ಅನ್ಯಾಯ ಆಗದಂತೆ ಗಮನ ಹರಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಂದಣಿಯಾಗಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಮಾಹಿತಿ ನೀಡಬೇಕು’ ಎಂದರು.

ಪರೀಕ್ಷೆ ಎಂದರೆ ಭಯದ ವಾತಾವರಣ ನಿರ್ಮಾಣ ಮಾಡಬಾರದು. ಪಠ್ಯ ಪುಸ್ತಕ ಓದಿದವರು ಯಾವುದೇ ರೀತಿಯ ಒತ್ತಡ ಇಲ್ಲದೆ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿಸಿದರು.

ವಸತಿ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಬಿಂದು ಮಾತನಾಡಿ, ‘ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಪೀಠೋಪಕರಣ, ಇಂಟರ್ನೆಟ್ ಸಂಪರ್ಕ ಸಹಿತ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಸೌಲಭ್ಯ ಹೀಗೆ ಹಲವು ಮೂಲ ಸೌಕರ್ಯ ಒದಗಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಆರ್.ಮಹೇಶ್, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ.ಆನಂದ್, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.