ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ | ಪ್ರಾಥಮಿಕ ಶಾಲೆಯಲ್ಲಿ ಎಲ್‌‌ಕೆಜಿ ಪ್ರಾರಂಭ

ಹಳೇ ವಿದ್ಯಾರ್ಥಿಗಳ ಸಂಘದ ಆರ್ಥಿಕ ಬೆಂಬಲ
Published 11 ಜೂನ್ 2024, 13:58 IST
Last Updated 11 ಜೂನ್ 2024, 13:58 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಸ್ಥರು, ಶಾಲಾಭಿವೃದ್ದಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ಬಳಗದ ಶ್ರಮದಿಂದಾಗಿ ಪೂರ್ವ ಪ್ರಾಥಮಿಕ ಶಾಲಾ ಸಮಿತಿ ಪ್ರಾರಂಭಿಸಿ ಸೋಮವಾರ ಎಲ್.ಕೆ.ಜಿ ತರಗತಿ ಪ್ರಾರಂಭಿಸಲಾಯಿತು.

ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದು ಹಾಗೂ ಸರ್ಕಾರಿ ಶಾಲೆಗಳ ಸಬಲೀಕರಣದ ಆಶಯ, ಗ್ರಾಮದ ಮಕ್ಕಳಿಗೆ ಗ್ರಾಮದಲ್ಲಿಯೇ ಗುಣಾತ್ಮಕ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ  ಸಮಿತಿ ರಚಿಸಲಾಗಿತ್ತು. ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡವನ್ನು ನವೀಕರಿಸಿ ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೂರು ಕೊಠಡಿ, ಮಕ್ಕಳಿಕೆ ಆಟಿಕೆ ವಸ್ತುಗಳು, ಮಕ್ಕಳ ಸ್ನೇಹಿ ಪೀಠೋಪಕರಣ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಮಕ್ಕಳಿಗೆ ಹೈಟೆಕ್ ಶೌಚಾಲಯ, ಸಾರಿಗೆ ವ್ಯವಸ್ಥೆ, ಹೊರಾಂಗಣ ಆಟದ ಮೈದಾನ ಸಿದ್ಧಪಡಿಸಲಾಗಿದೆ. ಮಕ್ಕಳನ್ನು ದಾಖಲು ಮಾಡಲು ಸಮಿತಿ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳ ಮನೆಗಳಿಗೆ ತೆರಳಿ ಪೋಷಕರ ಮನವೊಲಿಸಿ ಪ್ರಾರಂಭಿಕ ಹಂತದಲ್ಲಿಯೇ 15 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.

ಈ ಸಂದರ್ಭ ಸಮಿತಿ ಗೌರವಾಧ್ಯಕ್ಷ ವಿ.ಎಂ.ವಿಜಯ್, ಗ್ರಾಮದ ಪ್ರಮುಖರಾದ ಎಸ್.ಎಂ.ಡಿಸಿಲ್ವಾ, ಗಿರೀಶ್ ಮಲ್ಲಪ್ಪ, ವಿನೋದ್ ಕುಮಾರ್, ಶಿವದಾಸ್, ಲಲಿತಾ ಸಮಿತಿ ಅಧ್ಯಕ್ಷರಾದ ಬೋಜೇಗೌಡ, ಪದಾಧಿಕಾರಿಗಳಾದ ವಿನಯ್ ಸಂಭ್ರಮ್, ಎ.ಹೆಚ್.ತಿಮ್ಮಯ್ಯ, ಸಮಿತಿ ಸಂಚಾಲಕರಾದ ರತ್ನಕುಮಾರ್, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಇದ್ದರು.

ಸೋಮವಾರಪೇಟೆ ಸಮೀಪ ನೇರುಗಳಲೆ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಶಾಲಾಭಿವೃದ್ದಿ ಸಮಿತಿ ಸದಸ್ಯರ ಸಹಕಾರದಿಂದ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಿರುವುದು.
ಸೋಮವಾರಪೇಟೆ ಸಮೀಪ ನೇರುಗಳಲೆ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಶಾಲಾಭಿವೃದ್ದಿ ಸಮಿತಿ ಸದಸ್ಯರ ಸಹಕಾರದಿಂದ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಿರುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT