ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜ. 24ರಂದು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.

ನಗರದ ದೇವರಾಜು ಅರಸು ಭವನದಲ್ಲಿ ಅಂದು ಬೆಳಿಗ್ಗೆ 11ರಿಂದ 12ರ ವರೆಗೆ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ದೇಶ ಸೇವೆ ಹಾಗೂ ಅವರ ಜೀವನ ಮೌಲ್ಯ ಕುರಿತು ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು; ವೀರಸೇನಾನಿ ಕೆ.ಎಂ.ಕಾರ್ಯಪ್ಪ ಅವರ ಭಾವಚಿತ್ರವನ್ನು ಚಿತ್ರಕಲೆಯ ಮೂಲಕ ರಚಿಸಬೇಕು ಎಂದು ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಪ್ರಬಂಧವನ್ನು ಕೊಡವ ಭಾಷೆಯಲ್ಲೇ ಬರೆಯಬೇಕು. ಪ್ರತಿ ಸ್ಪರ್ಧೆಯಲ್ಲಿ ಪ್ರತಿ ಶಾಲೆಯಿಂದ ಮೂವರು ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರಬಂಧ ಬರೆಯಲು ಮತ್ತು ಚಿತ್ರ ಬಿಡಿಸಲು ಹಾಳೆಗಳನ್ನು ಅಕಾಡೆಮಿ ವತಿಯಿಂದ ನೀಡಲಾಗುವುದು. ಚಿತ್ರಕಲೆಗೆ ಅಗತ್ಯವಿರುವ ಲೇಖನಿ ಸಾಮಗ್ರಿಗಳನ್ನು ವಿದ್ಯಾರ್ಥಿಗಳೇ ತರಬೇಕು. ವಿಜೇತರಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು. ಮಾಹಿತಿಗೆ ದೂರವಾಣಿ: 08272 229074 ಮತ್ತು ಮೊಬೈಲ್ 89719 58996 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.