ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್‌: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಗೌಡಳ್ಳಿ ಶಾಲೆಯ ಬಾಲಕರು

Published 25 ನವೆಂಬರ್ 2023, 6:10 IST
Last Updated 25 ನವೆಂಬರ್ 2023, 6:10 IST
ಅಕ್ಷರ ಗಾತ್ರ

ಶನಿವಾರಸಂತೆ: ಈಚೆಗೆ ಬೆಂಗಳೂರಿನ ವಿದ್ಯಾನಗರದ ಕ್ರೀಡಾಂಗಣದಲ್ಲಿ ನಡೆದ 17 ವರ್ಷದ ಬಾಲಕರ ವಿಭಾಗದ ರಾಜ್ಯಮಟ್ಟದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಗೌಡಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ್ ಸುಫೇಲ್, ಜಿ.ಆರ್.ಕೌಶಿಕ್ ಮತ್ತು ಸಂಜಯ್  ಅವರು  ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದರು. ಪಂದ್ಯಾವಳಿಯಲ್ಲಿ ಮೈಸೂರು ವಿಭಾಗದ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಈ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗೌಡಳ್ಳಿ ಪ್ರೌಢಶಾಲೆಯ ಈ ಬಾಲಕರು ಮುಂದಿನ ತಿಂಗಳು ಡಿಸೆಂಬರ್ 25ರಂದು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಬಾಲಕರ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಕರ್ನಾಟಕ ತಂಡವನ್ನು ಮುನ್ನೆಡೆಸಲಿದ್ದಾರೆ ಎಂದು ತರಬೇತುದಾರ ಮತ್ತು ಗೌಡಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ.ಪ್ರವೀಣ್ ತಿಳಿಸಿದ್ದಾರೆ.

ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಗೌಡಳ್ಳಿ ಬಿ.ಜಿ.ಎಸ್ ಪ್ರೌಢಶಾಲೆಗೆ ಬಂದು ಆಯ್ಕೆಯಾದ ತಮ್ಮ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ನಂತರ ಮಾತನಾಡಿದ ಅವರು, ‘ಗ್ರಾಮೀಣ ಭಾಗದ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಮುಂದಿದ್ದು ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಕೀರ್ತಿ ತಂದುಕೊಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT