ಮಡಿಕೇರಿ: ಬೀದಿನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲು 5 ಬಾರಿ ಟೆಂಡರ್ ಕರೆದರು ಯಾರೊಬ್ಬರೂ ಭಾಗವಹಿಸುತ್ತಿಲ್ಲ ಎಂಬ ಅಂಶ ಇಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ನೇತೃತ್ವದಲ್ಲಿ ನಡೆದ ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ಪ್ರಸ್ತಾಪವಾಯಿತು.

ಪಶುಪಾಲನಾ ಇಲಾಖೆ ಉಪ ನಿರ್ದೇಶಕದ ಡಾ.ಲಿಂಗರಾಜ ದೊಡ್ಡಮನಿ ಮಾತನಾಡಿ, ‘ಬೀದಿನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಒಳಪಡಿಸುವ ಸಂಬಂಧ 5 ಬಾರಿ ಟೆಂಡರ್ ಕರೆಯಲಾಗಿದೆ. ಯಾರೂ ಸಹ ಭಾಗವಹಿಸುತ್ತಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಜಿಲ್ಲೆಯಾದ್ಯಂತ ಸೆ. 28ರಿಂದ ಅ. 28ರವರೆಗೆ ಒಂದು ತಿಂಗಳ ಕಾಲ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಗುತ್ತದೆ. ಈ ಸಂಬಂಧ ಜಿಲ್ಲೆಗೆ 21 ಸಾವಿರ ರೇಬಿಸ್ ಲಸಿಕೆ ಪೂರೈಕೆಯಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ‘ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದ್ದು, ಇವುಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ಓಡಾಡುವುದು ಕಷ್ಟಸಾಧ್ಯವಾಗಿದೆ. ಇವುಗಳ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಬೇಕು. ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸ್ಥಳೀಯ ಸಂಸ್ಥೆಗಳಲ್ಲೂ ಸಹ ಮ್ಯಾಚಿಂಗ್ ಫಂಡ್ ಇದ್ದು, ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಮುಂದಾಗುವಂತೆ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಮಾತನಾಡಿ, ‘ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಡಾಡಿ ಜಾನುವಾರುಗಳು ಇದ್ದು, ಎಲ್ಲೆಂದರಲ್ಲಿ ಓಡಾಡುವುದರಿಂದ ಅಪಘಾತಗಳು ಸಂಭವಿಸುತ್ತವೆ. ಆದ್ದರಿಂದ ಜಾನುವಾರುಗಳ ಸಂರಕ್ಷಣೆ ಅತ್ಯಗತ್ಯ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕಾಳಜಿ ವಹಿಸಬೇಕು’ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಕೃಷ್ಣಪ್ಪ, ಸಮಿತಿ ಸದಸ್ಯರಾದ ರೇಗನ್, ಶಿವಶಂಕರ, ಗಿರೀಶ್ ತಾಳತ್ಮನೆ, ಡಾ.ಕೆ.ಪಿ.ಅಯ್ಯಪ್ಪ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪ್ರಸನ್ನ, ಡಾ.ನವೀನ್, ಡಾ.ಗಿರೀಶ್, ಡಾ.ಸಂಜೀವ್ ಕುಮಾರ್ ಸಿಂಧೆ, ಡಾ.ರಾಜಾಶೇಖರ್ ಭಾಗವಹಿಸಿದ್ದರು.

‘ಗೋಶಾಲೆ ಸಮೀಪದ 8 ಎಕರೆಗೆ ತಂತಿ ಬೇಲಿ ಹಾಕಿ’

ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಬಳಿ ಸರ್ಕಾರಿ ಗೋಶಾಲೆಯಲ್ಲಿ 37 ಜಾನುವಾರುಗಳ ಸಂರಕ್ಷಣೆಗೆ ಮಾತ್ರ ಅವಕಾಶವಿದೆ. 2 ಎಕರೆಯಲ್ಲಿ ಮಾತ್ರ ಗೋಶಾಲೆ ಮಾಡಲಾಗಿದೆ. ಉಳಿದ 6 ಎಕರೆಯಲ್ಲಿಯೂ ಸಹ ತಂತಿ ಬೇಲಿ ನಿರ್ಮಾಣ ಮಾಡಿ ಹೆಚ್ಚಿನ ಗೋ ಸಾಕಾಣಿಕೆಗೆ ಅವಕಾಶ ಮಾಡಬೇಕು ಎಂದು ಪ್ರಾಣಿ ದಯಾ ಸಂಘದ ಸಮಿತಿ ಸದಸ್ಯರಾದ ಹರೀಶ್ ಆಚಾರ್ಯ ಮನವಿ ಮಾಡಿದರು. ರಾಷ್ಟ್ರೀಯ ಹೆದ್ದಾರಿಯ ಜೋಡುಪಾಲ ದೇವರಕೊಲ್ಲಿ ಕೊಯನಾಡು ಕಡೆಗಳಲ್ಲಿ ಬಿಡಾಡಿ ಜಾನುವಾರುಗಳು ಇದ್ದು ಅವುಗಳನ್ನು ಗೋಶಾಲೆಗೆ ಸ್ಥಳಾಂತರಿಸಬೇಕಿದೆ. ಹೀಗೆ ಜಿಲ್ಲೆಯಾದ್ಯಂತ ಬಿಡಾಡಿ ಜಾನುವಾರುಗಳನ್ನು ಗೋಶಾಲೆಗೆ ಸ್ಥಳಾಂತರಿಸಿ ಮೇವು ನೀರು ಒದಗಿಸಬೇಕಿದೆ ಎಂದು ಅವರು ಕೋರಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೆ.ನಿಡುಗಣೆಯ ಸರ್ಕಾರಿ ಗೋಶಾಲೆಯಲ್ಲಿ 8 ಎಕರೆ ಜಾಗ ನಿಗದಿಯಾಗಿದ್ದು ಈ ಎಲ್ಲಾ ಜಾಗವನ್ನು ಬಳಸಿಕೊಳ್ಳಲು ತಂತಿ ಬೇಲಿ ನಿರ್ಮಾಣ ಹಾಗೂ ಶೆಡ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ನಿರ್ದೇಶನ ನೀಡಿದರು. ಮಾತ್ರವಲ್ಲ 8 ಎಕರೆ ಜಾಗದಲ್ಲಿ ತಂತಿ ಬೇಲಿ ಅಳವಡಿಸುವ ಕಾರ್ಯವು ಒಂದು ತಿಂಗಳಲ್ಲಿ ಆಗಬೇಕು ಎಂದು ಹೇಳಿದರು. ಇನ್ನೂ ಹೆಚ್ಚಿನ ಜಾನುವಾರುಗಳ ಸಂರಕ್ಷಣೆಗೆ ಒತ್ತು ನೀಡುವಲ್ಲಿ ಸರ್ಕಾರಕ್ಕೆ ಪತ್ರ ಬರೆಯಲು ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.