ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಅರಣ್ಯ ರಕ್ಷಣೆ ಬಗ್ಗೆ ಬೀದಿ ನಾಟಕ ಪ್ರದರ್ಶನ

Published 8 ಫೆಬ್ರುವರಿ 2024, 4:15 IST
Last Updated 8 ಫೆಬ್ರುವರಿ 2024, 4:15 IST
ಅಕ್ಷರ ಗಾತ್ರ

ಸೋಮವಾರಪೇಟೆ: ಮಡಿಕೇರಿ ವನ್ಯಜೀವಿ ವಿಭಾಗದ ಪುಷ್ಪಗಿರಿ ವನ್ಯಜೀವಿ ವಲಯ, ಕೊಡಗು ಜಿಲ್ಲಾ ವಿದ್ಯಾ ಸಾಗರ ಕಲಾ ತಂಡದ ರಾಜು ಮತ್ತು ತಂಡದವರುಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆ ಬಗ್ಗೆ ಜನ ಜಾಗೃತಿಗಾಗಿ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಬೀದಿ ನಾಟಕ ಪ್ರದರ್ಶನ ಮಾಡಿದರು.


  ಉಪ ವಲಯ ಅರಣ್ಯಾಧಿಕಾರಿ ಪಿ.ಟಿ. ಶಶಿ ಮಾತನಾಡಿ, ಅರಣ್ಯಕ್ಕೆ ಬೆಂಕಿ ಬಿದ್ದು, ಪ್ರಾಣಿ, ಪಕ್ಷಿಗಳೊಂದಿಗೆ ಪರಿಸರಕ್ಕೆ ಹಾನಿಯಾಗುತ್ತಿದೆ. ಜನರು ಸಹಕರಿಸಿದಲ್ಲಿ ಮಾತ್ರ ಕಾಡ್ಗಿಚ್ಚನ್ನು ತಡೆಯಬಹುದು ಎಂದರು. ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

ಉಪ ಪ್ರಾಂಶುಪಾಲರು ಬಸವರಾಜಪ್ಪ ಚಾಲನೆ ನೀಡಿದರು. ಕಾಲೇಜಿನ ಉಪನ್ಯಾಸಕರು ಮತ್ತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT