ನಾಪೋಕ್ಲು: ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದು. ಇಂತಹ ಸಮಯ ಮತ್ತೆ ಸಿಗದು, ಸಮಯದ ಸದ್ಬಳಕೆಯನ್ನು ವಿದ್ಯಾರ್ಥಿಗಳು ಮಾಡಿಕೊಳ್ಳಬೇಕಿದೆ ಎಂದು ಒಲಿಂಪಿಯನ್ ಬಾಳೆಯಡ ಸುಬ್ರಮಣಿ ಹೇಳಿದರು.

ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಬಿರವಿದ್ದಾಗ ಮಾತ್ರ ತರಬೇತಿ ಪಡೆದುಕೊಂಡು ಮೈದಾನವನ್ನು ಬಳಕೆ ಮಾಡುವುದಲ್ಲ. ಸಮಯ ಸಿಕ್ಕಾಗಲೆಲ್ಲಾ ಆಟದ ಮೈದಾನಗಳ ಸದುಪಯೋಗ ಪಡೆದುಕೊಳ್ಳಬೇಕು, ಕ್ರೀಡೆಯಲ್ಲಿ ಮುಂದುವರಿಯಬೇಕು. ಶಿಕ್ಷಣ ಪೂರೈಸಿದ ನಂತರ ಉದ್ಯೋಗಕ್ಕೆ ಸೇರಿ ಹಣ ಬಂದಾಗ ಗುರು ಹಿರಿಯರನ್ನು, ಪೋಷಕರನ್ನು ಕಡೆಗಣಿಸಬಾರದು. ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದರು.

ಹಾಕಿ ವೀಕ್ಷಕ ವಿವರಣೆಗಾರ ಮಾಳೇಟಿರ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ನಿಂದ ದೂರವಿರಬೇಕು. ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು. ನಿತ್ಯವೂ ತರಬೇತಿ ಪಡೆದರೆ ಮಾನಸಿಕವಾಗಿ ದೈಹಿಕವಾಗಿ ಬೆಳೆಯಲು ಸಾಧ್ಯ ಎಂದರು.

ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಒಂದು ತಿಂಗಳ ಕಾಲ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದಲ್ಲಿ 80ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಲ್ಲ ವಿದ್ಯಾರ್ಥಿಗಳಿಗೂ ಅತಿಥಿಗಳು ಪ್ರಮಾಣ ಪತ್ರ ವಿತರಿಸಿದರು.

ಹಾಕಿ ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅಧ್ಯಕ್ಷತೆ ವಹಿಸಿದ್ದರು.

ತರಬೇತಿದಾರರಾದ ಅಂಜಪರವಂಡ ರೋಶನ್ ಮಾದಪ್ಪ, ಮುಕ್ಕಾಟಿರ ಮುತ್ತಪ್ಪ, ಅಪ್ಪಚೆಟ್ಟೋಳಂಡ ಅಯ್ಯಪ್ಪ, ಅಪ್ಪಚ್ಚಿರ ಪಳಂಗಪ್ಪ, ಕೇಟೋಳಿರ ಡಾಲಿ ಅಚ್ಚಪ್ಪ, ಹಿರಿಯರಾದ ಕೇಟೋಳಿರಡಾಲಿ, ಹಾಕಿ ಕ್ಲಬ್ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಉಪಾಧ್ಯಕ್ಷ ಕೈಬುಲಿರ ಉಮೇಶ್, ಗೌರವ ಕಾರ್ಯದರ್ಶಿ ಚಂಗೆಟ್ಟರ ಕುಮಾರ ಸೋಮಣ್ಣ, ಖಜಾಂಚಿ ಮಚ್ಚುರ ಯದುಕುಮಾರ್, ನಿರ್ದೇಶಕರು, ಪ್ರಮುಖರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-1385782478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.