ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ | ಕಾಡಾನೆ ದಾಳಿ: ವಿದ್ಯಾರ್ಥಿ ಪಾರು

Published 24 ಮೇ 2024, 4:28 IST
Last Updated 24 ಮೇ 2024, 4:28 IST
ಅಕ್ಷರ ಗಾತ್ರ

ವಿರಾಜಪೇಟೆ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿದ ಘಟನೆ ಗುರುವಾರ ಸಮೀಪದ ಚಂಬೆಬೆಳ್ಳೂರು ಗ್ರಾಮದ ಪುದುಕೋಟೆಯಲ್ಲಿ ನಡೆದಿದೆ.

ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಚಂಗಪ್ಪ ಎಂಬುವ ವಿದ್ಯಾರ್ಥಿ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ ಗಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ದಿಢೀರ್ ಎದುರಾದ ಕಾಡಾನೆ ಆತನನ್ನು ಬೆನ್ನಟ್ಟಿದೆ. ವಿದ್ಯಾರ್ಥಿ ಚಂಗಪ್ಪ ಓಡಿ ಕಾಡಾನೆಯ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಓಡುವ ಸಂದರ್ಭ ಬಿದ್ದು ವಿದ್ಯಾರ್ಥಿಗೆ ಗಾಯಗಳು ಉಂಟಾಗಿವೆ. ಬಳಿಕ ವಿದ್ಯಾರ್ಥಿಗೆ ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.


ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಘಟನೆ ಕುರಿತು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT