ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ

ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ
Published 3 ಜುಲೈ 2024, 4:43 IST
Last Updated 3 ಜುಲೈ 2024, 4:43 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ ಈಚೆಗೆ ನಡೆಯಿತು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಬ್ಯಾಂಕ್ ಅಧಿಕಾರಿ ಕಂಜಿತಂಡ ಸ್ವಾತಿ ಸುಬ್ರಮಣಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಶಾಲೆಯ ಪ್ರಾಂಶುಪಾಲರಾದ ಎಂ.ಜಿ.ಸವಿತಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ, ಸಾಹಿತ್ಯ, ವಿಜ್ಞಾನ, ಕಲಾ, ವಾಣಿಜ್ಯ ಹಾಗೂ ಕ್ವಿಜ್ ಸಂಘಗಳನ್ನು ಉದ್ಘಾಟಿಸಲಾಯಿತು.

ವಿಜ್ಞಾನ ಸಂಘವನ್ನು ಕೊಡವ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್‌ಕುಮಾರ್, ಕಲಾಸಂಘವನ್ನು ಶಾಲೆಯ ಸಂಚಾಲಕಿ ಕನ್ನಂಡ ಕವಿತಾ ಕಾವೇರಮ್ಮ, ವಾಣಿಜ್ಯ ಸಂಘವನ್ನು ಶಾಲೆಯ ಕಾರ್ಯಾಧ್ಯಕ್ಷ ಕೇಕಡ ಎ ದೇವಯ್ಯ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಸಾಹಿತ್ಯ ಸಂಘವನ್ನು ಹಾಗೂ ಕಾಳಚಂಡ ಎಂ.ಅಪ್ಪಣ್ಣ ಕ್ವಿಜ್ ಸಂಘವನ್ನು ಉದ್ಘಾಟಿಸಿದರು.

ಕಳೆದ ಸಾಲಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಶಾಲಾ ಆಡಳಿತಾಧಿಕಾರಿ ಮುಕ್ಕಾಟಿರ ಪೊನ್ನಮ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT