ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ | ಹಾಲಿನ ಡೈರಿಗೆ ವಿದ್ಯಾರ್ಥಿಗಳ ಭೇಟಿ: ಮಾಹಿತಿ ಸಂಗ್ರಹ

Published 27 ಮೇ 2024, 5:54 IST
Last Updated 27 ಮೇ 2024, 5:54 IST
ಅಕ್ಷರ ಗಾತ್ರ

ಸೋಮವಾರಪೇಟೆ: ಸಮೀಪದ ಆಲೇಕಟ್ಟೆ ರಸ್ತೆಯ ಹಾಲಿನ ಡೈರಿಗೆ ಭೇಟಿ ನೀಡಿದ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಹೈನುಗಾರಿಕೆ ಬಗ್ಗೆ ರೈತರು ಹಾಗೂ ಡೈರಿ ಸಿಬ್ಬಂದಿಯಿಂದ ಶನಿವಾರ ಮಾಹಿತಿ ಪಡೆದರು.

ಚೌಡ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಡೈರಿ ಕಾರ್ಯನಿರ್ವಹಿಸುತ್ತಿದೆ. 
ಸರ್ಕಾರದಿಂದ ಡೈರಿಗಳ ಮೂಲಕ ಹೈನುಗಾರರಿಗೆ ಸಿಗುವ ಸವಲತ್ತುಗಳು, ಫೀಡ್ಸ್, ಔಷಧಿಗಳ ಬಗ್ಗೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಯೋಗೇಂದ್ರ ವಿವರಣೆ ಒದಗಿಸಿದರು.

ಹಾಲಿನ ಗುಣಮಟ್ಟ, ಹವಾಮಾನ ವೈಪರೀತ್ಯದಿಂದ ಹಾಲಿನ ಉತ್ಪಾದನೆ ಮೇಲೆ ಆಗುವ ಏರಿಳಿತ, ಹಸುಗಳ ಸಾಕಾಣಿಕೆ, ಮೇವು, ಹಾಲಿನ ಸಾಗಾಟ, ಸಂಗ್ರಹ, ಉತ್ಪಾದನಾ ವೆಚ್ಚ, ಮಾರುಕಟ್ಟೆಯ ಬೇಡಿಕೆ ಸೇರಿ ಇನ್ನಿತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದರು. ಈ ಸಂದರ್ಭ ಕಾವ್ಯ, ಅಂಕಿತ, ಚೈತನ್ಯ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT