ಮಡಿಕೇರಿ: ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಂಬಂಧ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ ಕಡೆಗಳಲ್ಲಿ ಪೌರಕಾರ್ಮಿಕರ ವಸತಿ ಗೃಹ ಕಟ್ಟಡ ಶಿಥಿಲಗೊಂಡಿರುವ ಮಾಹಿತಿ ಪಡೆದು ವರದಿ ನೀಡಬೇಕು. ಜೊತೆಗೆ, ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಈ ಕುರಿತು ವಿಷಯ ಪ್ರಸ್ತಾಪಿಸಿದ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಡಿಕೇರಿ ನಗರಸಭೆ, ವಿರಾಜಪೇಟೆ ಮತ್ತು ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿದಂತೆ ಪೌರಕಾರ್ಮಿಕರು ವಾಸಿಸುವ ವಸತಿ ಗೃಹಗಳು ಹಳೇ ಕಟ್ಟಡಗಳಾಗಿದ್ದು, ಶಿಥಿಲಗೊಂಡಿವೆ. ಆದ್ದರಿಂದ ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಮನವಿ ಮಾಡಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಪೌರಕಾರ್ಮಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕುಟುಂಬಗಳಿಗೆ ವಸತಿ ಒದಗಿಸುವಂತಾಗಬೇಕು ಎಂದು ಕೋರಿದರು.

ಸಮಿತಿ ನಾಮನಿರ್ದೇಶಿತ ಸದಸ್ಯರಾದ ಮುತ್ತಪ್ಪ ಮಾತನಾಡಿ, ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದಲ್ಲಿ ನಿವೇಶನ ರಹಿತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇವರಿಗೆ 94 ಸಿ, ರಡಿ ನಿವೇಶನ ಹಕ್ಕುಪತ್ರ ಒದಗಿಸಬೇಕು. ಕೆಲವು ಪರಿಶಿಷ್ಟ ಕುಟುಂಬಗಳು ಆರ್‌ಟಿಸಿ ಇಲ್ಲದೆ ಸೌಲಭ್ಯ ಪಡೆಯಲು ಪರದಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು’ ಎಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ತಹಶೀಲ್ದಾರ್ ಪ್ರವೀಣ್ ಕುಮಾರ್, ‘2005 ಜನವರಿ 1ರ ಹಿಂದೆ ವಾಸಿಸುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಇದ್ದು, ಕಂದಾಯ ಪಾವತಿ ಬಗ್ಗೆ ಖಾತರಿಪಡಿಸಿಕೊಂಡು ಹಕ್ಕುಪತ್ರ ಪಡೆಯಲು ಮುಂದಾಗಬೇಕು’ ಸಲಹೆ ಮಾಡಿದರು.

ಬಳಿಕ ಮಾತನಾಡಿದ ಮುತ್ತಪ್ಪ, ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯುವಜನರು ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಪೂರ್ಣಗೊಳಿಸಿ ಸಾಕಷ್ಟು ಉದ್ಯೋಗಾಕಾಂಕ್ಷಿಗಳು ಇದ್ದಾರೆ. ಇವರಿಗೆ ವೃತ್ತಿ ತರಬೇತಿ ನೀಡಬೇಕು’ ಎಂದು ಮನವಿ ಮಾಡಿದರು.

ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ‘ಯುವನಿಧಿ ಯೋಜನೆಯಡಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವ್ಯಾಸಂಗ ಮಾಡಿರುವವರಿಗೆ ಯುವನಿಧಿ ಸೌಲಭ್ಯವಿದ್ದು, ಇದನ್ನು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಮತ್ತೊಬ್ಬ ಸದಸ್ಯರಾದ ಪಿ.ಪಿ.ಸುಕುಮಾರ್ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ರಸ್ತೆ ಸುದಾರಿಸಬೇಕು. ಆ ನಿಟ್ಟಿನಲ್ಲಿ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಡಾವಳಿ ಪ್ರಸ್ತಾಪಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತ ರಮೇಶ್, ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ತಹಶೀಲ್ದಾರರಾದ ರಾಮಚಂದ್ರ, ಮೋಹನ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ, ಸಹಾಯಕ ನಿರ್ದೇಶಕ ಪಿ.ವಿ.ಶ್ರೀನಿವಾಸ್, ಸಮಿತಿ ಸದಸ್ಯರಾದ ದಿಲೀಪ್ ಕುಮಾರ್, ಜೇನುಕುರುಬರ ಕೆಂಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.