ಸುಂಟಿಕೊಪ್ಪ: ಇಲ್ಲಿನ ಪೊಲೀಸ್ ಠಾಣೆಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಸಂಬಂಧ ಶುಕ್ರವಾರ ಸಂಜೆ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಚಂದ್ರಶೇಖರ್ ಮಾತನಾಡಿ, ‘ಪ್ರಕೃತಿ ವಿಕೋಪ ಸಂಭವಿಸುವ ಸಂದರ್ಭದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘2018ರಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸಂಭವಿಸಿದ ಭೂಕುಸಿತದ ಸಂದರ್ಭ ಇಲ್ಲಿನ ಬಹಳಷ್ಟು ಸಂಘಟನೆ ಸದಸ್ಯರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯಾಚರಣೆ ನಡೆಸಿದ್ದು ಎಲ್ಲರಿಗೆ ತಿಳಿದಿದೆ. ಈ ಬಾರಿಯೂ ಕೊಡಗಿನಲ್ಲಿ ಜೂನ್ ತಿಂಗಳಲ್ಲಿ ಅತ್ಯಧಿಕ ಮಳೆ ಬಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ತಮ್ಮಲ್ಲಿರುವ ಟ್ರಾಕ್ಟರ್, ಜೆಸಿಬಿ, ಕ್ರೇನ್, ಮರ ಕತ್ತರಿಸುವ ಯಂತ್ರಗಳು, ಆಂಬುಲೆನ್ಸ್, ವಾಹನಗಳ ಬಳಕೆಗೆ ಮಾಲೀಕರು ಕೈಜೋಡಿಸಬೇಕು’ ಎಂದು ಅವರು ಮನವಿ ಮಾಡಿದರು.

ಸಿಪಿಐ ದಿನೇಶ್ ಮಾತನಾಡಿ, ‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಅವಘಡಗಳು ಸಂಭವಿಸುವ ಸಮಯದಲ್ಲಿ ವಿಡಿಯೊ ಚಿತ್ರೀಕರಣ ಮಾಡದೇ ಅಪಾಯದಲ್ಲಿರುವವರನ್ನು ರಕ್ಷಿಸುವ ಜೊತೆಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ’ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ರಫೀಕ್ ಖಾನ್, ಶಬೀರ್, ಬಿ.ಕೆ.ಪ್ರಶಾಂತ್ ಮಾತನಾಡಿ, ಇಲ್ಲಿನ ಪಂಪ್ಹೌಸ್ ರಸ್ತೆಯಲ್ಲಿರುವ ಬಡಾವಣೆಯು ಅಪಾಯದ ಅಂಚಿನಲ್ಲಿದ್ದು, ಈ ಭಾಗದಲ್ಲಿ ನೂರಾರು ಕುಟುಂಬಗಳು ನೆಲೆಸಿವೆ. ಅನಾಹುತ ಸಂಭವಿಸುವ ಮುನ್ನ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿ ಆಗ್ರಹಿಸಿದರು.

ಪಿಡಿಒ ವಿ.ಜಿ.ಲೋಕೇಶ್, ಅಧ್ಯಕ್ಷ ಪಿ.ಅರ್.ಸುನಿಲ್ ಕುಮಾರ್, ಪಿಎಸ್ಐ ಮೋಹನ್ ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.