ಸುಂಟಿಕೊಪ್ಪ: ಇಲ್ಲಿಗೆ ಸಮೀಪದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗಿರಿಜನ ಹಾಡಿಯ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಸ್ಥಳಕ್ಕೆ ಬಂದ ಪೊಲೀಸರು ಕಾರ್ಯಕ್ರಮವನ್ನು ತಡೆದಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮಿಳುನಾಡಿನಿಂದ ಕೆಲವರು ಬಂದಿದ್ದರು. ಅವರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಈ ವೇಳೆ ಕೆಲವು ವ್ಯಕ್ತಿಗಳು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ಈ ಜಾಗದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಿಸಲಾಗಿದ್ದು, ಅದರ ಉದ್ಘಾಟನೆಗೆ ತಮಿಳುನಾಡಿನಿಂದ ಜನರು ಬಂದಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮುಖಂಡ ಚಂದ್ರಶೇಖರ್ ಅವರು ಹಾಡಿಗಳಲ್ಲಿ ಮತಾಂತರ ಚಟುವಟಿಕೆ ನಡೆಯುತ್ತಿದೆ, ಮತಾಂತರಗೊಂಡವರು ಈ ಜಾಗದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಿಸಿ ಪ್ರಾರ್ಥನೆಗೆ ವ್ಯವಸ್ಥೆ ಮಾಡಿಕೊಂಡಿದ್ದರು ಎಂದು ದೂರಿದರು.

ಮುಖಂಡರಾದ ಜಗನ್ನಾಥ್ ಹಾಗೂ ಪಿ.ಆರ್.ಸುನಿಲ್ಕುಮಾರ್ ಅವರು ಇದು ಧಾರ್ಮಿಕ ಸಾಮರಸ್ಯವನ್ನು, ಸಹಬಾಳ್ವೆಯನ್ನು ಕದಡುವ ಷಡ್ಯಂತ್ರದ ಒಂದು ಭಾಗ ಎಂದು ಕಿಡಿಕಾರಿದರು.

ಈ ಕುರಿತು ‘ಪ್ರಜಾವಾಣಿ’ ಪೊಲೀಸರನ್ನು ಸಂಪರ್ಕಿಸಿದಾಗ ಅವರು, ‘ಕಾರ್ಯಕ್ರಮವೊಂದು ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ನಡೆಯುತ್ತಿತ್ತು. ಅದನ್ನು ತಡೆದು ಭಾಗವಹಿಸಲು ಬಂದಿದ್ದವರನ್ನು ವಾಪಸ್ ಕಳುಹಿಸಿದ್ದೇವೆ. ಕಾರ್ಯಕ್ರಮಕ್ಕೆ ಅನುಮತಿ ಪಡೆಯಲಾಗಿತ್ತೇ ಎಂದು ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದೇವೆ. ಅವರಿಂದ ಮಾಹಿತಿ ಬಂದ ನಂತರ ಮುಂದಿನ ಕ್ರಮ ಜರುಗಿಸುತ್ತೇವೆ. ಸದ್ಯ, ಯಾರನ್ನೂ ವಶಕ್ಕೆ ಪಡೆದಿಲ್ಲ ಹಾಗೂ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-51-936868811

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.