ಭಾನುವಾರ, ಅಕ್ಟೋಬರ್ 25, 2020
22 °C

ಸುಂಟಿಕೊಪ್ಪ: ಮುಂದುವರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಂಟಿಕೊಪ್ಪ: ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ಧಾರಾಕಾರ ಮಳೆ ಸುರಿಯಿತು.

ಕಳೆದೆರಡು ದಿನಗಳಿಂದ ಬಿಡುವು ನೀಡಿ ಸುರಿಯುತ್ತಿದ್ದ ಮಳೆ ಶುಕ್ರವಾರ ಸಂಜೆಯಿಂದ ಎಡೆಬಿಡದೇ ಬರುತ್ತಿದೆ. ಶುಕ್ರವಾರ ರಾತ್ರಿಯಿಂದ ಬೆಳಿಗ್ಗೆವರೆಗೆ ಉತ್ತಮ ಮಳೆಯಾಯಿತು. ಶನಿವಾರ ಸಹ ತುಂತುರು ಮಳೆಯ ಜೊತೆಗೆ ಧಾರಾಕಾರವಾಗಿ ಮಳೆಯಾಯಿತು. ವಾಹನ, ಜನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮಳೆಯಿಂದಾಗಿ ಸುತ್ತಮುತ್ತಲಿನ ಗ್ರಾಮದ ಜನ ಪಟ್ಟಣದತ್ತ ಧಾವಿಸುತ್ತಿಲ್ಲ. ಇದರಿಂದ ವ್ಯಾಪಾರ ವಹಿವಾಟಿನಲ್ಲೂ ಕೊಂಚ ಇಳಿಮುಖಗೊಂಡಿದೆ. ಈ ಮಧ್ಯೆ ಚಳಿ ಗಾಳಿ ಬೀಸುತ್ತಿರುವುದರಿಂದ ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

ಕೊಡಗರಹಳ್ಳಿ, ಮಾದಾಪುರ, ಕೆದಕಲ್, ಹರದೂರು, ಕಂಬಿಬಾಣೆ, ನಾಕೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಶನಿವಾರ ಮಳೆ ಆಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು