ಬುಧವಾರ, ಅಕ್ಟೋಬರ್ 28, 2020
23 °C
ಈ ವರ್ಷ ಬೆಳಿಗ್ಗೆ 7.03ಕ್ಕೆ ಭಕ್ತರಿಗೆ ಒಲಿಯುವ ಕಾವೇರಿ

ಅ.17ರಂದು ಕಾವೇರಿಗೆ ತೀರ್ಥೋದ್ಭವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಲಕಾವೇರಿ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ಅ.17ರ ಶನಿವಾರ ತೀರ್ಥೋದ್ಭವ ನಡೆಯಲಿದೆ. ಈ ವರ್ಷ ಬೆಳಿಗ್ಗೆ 7.03ಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಕಾವೇರಿ, ತೀರ್ಥರೂಪಿಣಿ ಆಗಿ ಭಕ್ತರಿಗೆ ಒಲಿಯಲಿದ್ದಾಳೆ.

ಪ್ರತಿ ವರ್ಷ ತೀರ್ಥೋದ್ಭವದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಮೈಸೂರು, ಮಂಡ್ಯ ಸೇರಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಮಿಳುನಾಡು–ಕೇರಳ ರಾಜ್ಯದಿಂದಲೂ ಭಕ್ತರು ಆಗಮಿಸುತ್ತಿದ್ದರು. ಆದರೆ, ಈ ವರ್ಷ ಕೋವಿಡ್ ಕಾರಣದಿಂದ ಭಕ್ತರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಯಿದೆ.

ತೀರ್ಥೋದ್ಭವ ನಡೆದ ಬಳಿಕ ಕಾವೇರಿ ತೀರ್ಥವನ್ನು ಪವಿತ್ರ ಕುಂಡಿಕೆಯಿಂದ ಕೊಂಡೊಯ್ದು ಕೊಡಗಿನ ಮನೆ ಮನೆಗೆ ವಿತರಿಸುವ ಸಂಪ್ರದಾಯವೂ ಇದೆ.

ಸೆ. 26ರಂದು ಬೆಳಿಗ್ಗೆ 8.31ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಭಾಗಮಂಡಲದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವ ಮೂಲಕ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಚಾಲನೆ ದೊರೆಯಲಿದೆ.

ಅ.4ರಂದು ಬೆಳಿಗ್ಗೆ 10.33ರ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, 14ರಂದು ಬೆಳಿಗ್ಗೆ 11.45ಕ್ಕೆ ಅಕ್ಷಯ ಪಾತ್ರೆ ಇರಿಸುವುದು, ಅದೇ ದಿನ ಸಂಜೆ 5.15ರ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಯಿಡುವ ಧಾರ್ಮಿಕ ಕಾರ್ಯಗಳು ಕ್ಷೇತ್ರದಲ್ಲಿ ನಡೆಯಲಿವೆ ಎಂದು ಭಗಂಡೇಶ್ವರ – ತಲಕಾವೇರಿ ದೇವಾಲಯ ಸಮಿತಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು