ಸೋಮವಾರಪೇಟೆ: ರಾಜ್ಯ ಒಕ್ಕಲಿಗರ ಸಂಘದಿಂದ ಕೊಡಗು ಜಿಲ್ಲೆಯ ಒಕ್ಕಲಿಗ ಸಮುದಾಯದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ಪ್ರತಿಭಾನ್ವಿತರಿಗೆ ಡಿ.6ರಂದು ನಗದು ಬಹುಮಾನದೊಂದಿಗೆ ಪುರಸ್ಕರಿಸಲಾಗುವುದು ಎಂದು ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಎಚ್.ಎನ್. ರವೀಂದ್ರ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಡಿ. ಬೆಳಿಗ್ಗೆ 10ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು ಭಾಗಿಯಾಗಲಿದ್ದಾರೆ. ಎಲ್ಲ ಪೋಷಕರು ತಮ್ಮ ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಬಂದು ಪುರಸ್ಕಾರ ಸ್ವೀಕರಿಸಬೇಕು’ ಎಂದರು.

ಸೋಮವಾರಪೇಟೆಯಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿನಿಯರ ವಸತಿ ನಿಲಯ ಸ್ಥಾಪನೆಗೆ ಈ ಹಿಂದೆಯೇ ಕ್ರಮ ವಹಿಸಲಾಗಿತ್ತು. ಕಾಣದ ಕೈಗಳ ರಾಜಕೀಯ ಕುತಂತ್ರದಿಂದಾಗಿ ಅಲ್ಪ ಹಿನ್ನಡೆಯಾಗಿತ್ತು. ಇದೀಗ ಒತ್ತಡ ಹಾಕಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. 8 ತಿಂಗಳೊಳಗೆ ಹಾಸ್ಟೆಲ್ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ’ ಎಂದರು.

‘ಮಡಿಕೇರಿ ಹಾಗೂ ಕುಶಾಲನಗರದಲ್ಲಿಯೂ ವಸತಿ ನಿಲಯ ಸ್ಥಾಪನೆಗೆ ಚಿಂತಿಸಿದ್ದು, ಕೊಡಗಿನಲ್ಲಿ ನರ್ಸಿಂಗ್ ಕಾಲೇಜು ಸ್ಥಾಪನೆ ಸಂಬಂಧ ಈಗಾಗಲೇ ಆದಿಚುಂಚನಗಿರಿ ಮಹಾ ಸಂಸ್ಥಾನದ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಚರ್ಚಿಸಲಾಗಿದೆ. ಒಕ್ಕಲಿಗರ ಸಂಘದ ಮೂಲಕ ಕಾಲೇಜು ಸ್ಥಾಪನೆಗೆ ಕ್ರಮವಹಿಸುವ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿವೆ. ನರ್ಸಿಂಗ್ ಕಾಲೇಜು ಸ್ಥಾಪನೆಯಿಂದ ಜಿಲ್ಲೆಯ ಸಾವಿರಾರು ಮಂದಿಗೆ ಅನುಕೂಲವಾಗಲಿದೆ’ ಎಂದು ರವೀಂದ್ರ ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಹಾಲಪ್ಪ, ಪೃಥ್ವಿ ಗೌಡಳ್ಳಿ, ಗಿರಿಧರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.