ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಥಳಿತ: ಪೋಷಕರ ಆಕ್ರೋಶ

Last Updated 26 ಫೆಬ್ರುವರಿ 2020, 13:45 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ‘ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಾರೆ’ ಎಂದು ಸಮೀಪದ ಕೊಡಗರಹಳ್ಳಿಯ ಶಾಂತಿನಿಕೇತನ ಖಾಸಗಿ ಶಾಲೆಯ ಕನ್ನಡ ಶಿಕ್ಷಕ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಪೋಷಕರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ನಡೆದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿಲ್ಲ ಎಂದು 10-12 ವಿದ್ಯಾರ್ಥಿಗಳ ಕೈಗಳಿಗೆ ಶಿಕ್ಷಕರೊಬ್ಬರು ಹೊಡೆದಿದ್ದು, ಬಾಸುಂಡೆ ಬಿದ್ದಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು ಅವರು, ಮಕ್ಕಳನ್ನು ವಿಚಾರಣೆ ಒಳಪಡಿಸಿ ಶಿಕ್ಷಕನಿಗೆ ಎಚ್ಚರಿಕೆ ನೀಡಿದ್ದಲ್ಲದೇ ಮುಂದೆ ಈ ರೀತಿ ವರ್ತಿಸದಂತೆ ಲಿಖಿತ ರೂಪದಲ್ಲಿ ಬರೆಸಿಕೊಂಡಿದ್ದಾರೆ.ವಮಕ್ಕಳ ಬಗ್ಗೆ ಈ ರೀತಿ ವರ್ತಿಸಿರುವ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನೋಟಿಸ್‌ ಜಾರಿ ಮಾಡಲಾಗುತ್ತದೆ ಎಂದು ಪಾಂಡು ತಿಳಿಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶಾಲಾ ಮುಖ್ಯ ಶಿಕ್ಷಕಿ ಮೇರಿ ಫಾತಿಮಾ, ಮಂಗಳವಾರ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ನನ್ನ ಗಮನಕ್ಕೆ ತಂದಿರುವುದಿಲ್ಲ. ವಿಷಯ ತಿಳಿದ ಮೇಲೆ ಆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT