ಮಂಗಳವಾರ, ಆಗಸ್ಟ್ 4, 2020
26 °C

ಕೆರೆಗೆ ಬಿದ್ದು ಶಿಕ್ಷಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಪೋಕ್ಲು: ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಿ ಕೈ ತೊಳೆಯಲೆಂದು ಹೋದ ಶಿಕ್ಷಕರೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.

ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಜಯ ಪೂವಣ್ಣ (55) ಅವರು ಕೊಂಡಂಗೇರಿ ಸಮೀಪದ ಕಾಫಿ ತೋಟಕ್ಕೆ ಮಂಗಳವಾರ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ.

ಪಾರಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ತೋಟದಿಂದ ಶಾಲೆಗೂ ತೆರಳದೆ, ಮನೆಗೂ ಹಿಂತಿರುಗದೆ ಇದ್ದುದರಿಂದ ಸಂಶಯಗೊಂಡ ಕುಟುಂಬಸ್ಥರು ಹುಡುಕಾಡಿದಾಗ ಕೆರೆಗೆ ಬಿದ್ದಿರುವುದು ಗೊತ್ತಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಅಂತ್ಯಸಂಸ್ಕಾರ ಬುಧವಾರ ಕೊಳಕೇರಿ ಗ್ರಾಮದಲ್ಲಿ ಜರುಗಿತು.

ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು