ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಶುಕ್ರವಾರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಇಲ್ಲಿನ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶುಕ್ರವಾರ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಮೈಸೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದ ಉಪನ್ಯಾಸಕ ಎಸ್.ಪಿ.ನಾಗರಾಜು ಮಾತನಾಡಿ, ‘ಗೂಗಲ್’ ಯಾವುದೇ ವಿಧದಲ್ಲೂ ಗುರುವಿನ ಸ್ಥಾನವನ್ನು ಪಡೆಯಲಾಗದು. ಗೂಗಲ್ನಿಂದ ಕೇವಲ ಮಾಹಿತಿಗಳನ್ನಷ್ಟೇ ಪಡೆದುಕೊಳ್ಳಬಹುದು. ಆದರೆ, ತರಗತಿಯಲ್ಲಿ ಗುರು ಮಾಹಿತಿ ನೀಡುವುದರ ಜೊತೆಗೆ ಅರ್ಥ ಮಾಡಿಸುತ್ತಾರೆ’ ಎಂದು ಹೇಳಿದರು.

‘ಸಮಾಜದಲ್ಲಿ ಹೇಗೆ ಸಂತೋಷವಾಗಿ ಬದುಕಬೇಕು ಎಂದು ಕಲಿಸುವವನು ಗುರು. ನಮ್ಮನ್ನೆಲ್ಲ ಈ ಸ್ಥಿತಿಗೆ ತಂದ ಗುರುವನ್ನು ನಾವಿಂದು ನೆನಪಿಸಿಕೊಳ್ಳಬೇಕು’ ಎಂದರು.

ರಾಧಾಕೃಷ್ಣನ್ ಅವರು ಮೈಸೂರಿನಲ್ಲಿ 2 ವರ್ಷ ಬೋಧನೆ ಮಾಡಿ ಹೊರಡುವಾಗ ಅವರ ಶಿಷ್ಯರು ಸಾರೋಟಿನಲ್ಲಿ ಅವರನ್ನು ರೈಲ್ವೆ ನಿಲ್ದಾದವರೆಗೂ ಮೆರವಣಿಗೆ ಮಾಡಿದ ಪ್ರಸಂಗ ಪ್ರಸ್ತಾಪಿಸಿದರು.

ಬಸವಣ್ಣನವರ ‘ಕಲ್ಲು ದೇವರು ದೇವರಲ್ಲ, ಮಣ್ಣು ದೇವರು ದೇವರಲ್ಲ,....ತನ್ನತಾನಾರೆಂದು ತಿಳಿದೆಡೆ ತಾನೇ ದೇವನೋಡಾ ಅಪ್ರಮಾಣ ಕೂಡಲಸಂಗಮದೇವಾ’ ಎಂಬ ವಚನ ಉಲ್ಲೇಖಿಸಿದ ಅವರು, ಈ ಬಗೆಯ ಅರಿವು ನೀಡುವವರು ಗುರು’ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್ ಮಾತನಾಡಿ, ‘ಅತ್ಯುತ್ತಮ ಸೇವೆ ಸಲ್ಲಿಸಿ ಸಾವಿರಾರು ಮಕ್ಕಳಿಗೆ ಬೆಳಕು ತೋರಿದ ಹಾಗೆಯೇ ಸಮಯಕ್ಕೆ ಸರಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಬದುಕಲ್ಲಿ ಜ್ಯೋತಿ ಆಗುವ ಶಿಕ್ಷಕರುಗಳಿಗೆ ನಮನ’ ಎಂದು ಹೇಳಿದರು.

ಸರ್ಕಾರಿ ಶಾಲೆಯ ಶಿಕ್ಷಕರಾದ ಕೆ.ಆರ್.ಶಾಲಿನಿ, ಎ.ಡಿ.ಮೀನಾಕ್ಷಿ, ಎಂ.ವನಜಾ ಕೆ.ವಿ.ಜಾನ್ಸಿ, ಎಸ್.ಎ.ಯೋಗೇಶ್, ಎಂ.ಎಸ್.ಅಬ್ದುಲ್ ರಬ್, ಎ.ಕೆ.ಮಾಚಮ್ಮ, ಕೆ.ಕೆ.ಸುಷಾ, ಎಚ್.ಡಿ.ಲೋಕೇಶ್ ಅವರಿಗೆ, ಖಾಸಗಿ ಶಾಲಾ ವಿಭಾಗದಲ್ಲಿ ಮಡಿಕೇರಿಯ ಸಂತ ಮೈಕಲರ ಶಾಲೆಯ ರೆಜಿನಾ ವಿನ್ಸೆಂಟ್ ಹಾಗೂ ಕ್ರೆಸೆಂಟ್ ಶಾಲೆಯ ಸುಲ್ಹತ್ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವಯ್ಯ ಪಲ್ಲೆದ್, ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ ದೈಹಿಕ ಶಿಕ್ಷಕರ ಸಂಘ ಅಧ್ಯಕ್ಷ ಪೂರ್ಣೇಶ್, ಜಿಲ್ಲಾ ಪದವಿಪೂರ್ವ ಕಾಲೇಜು, ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ದೇವಕಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಮಂಜುಳಾ ಚಿತ್ರಪುರ, ಬಿಂದು ಭಾಗವಹಿಸಿದ್ದರು.

ಸಮಸ್ಯೆ ಬಗೆಹರಿಸುವ ಭರವಸೆ:

ಶಾಸಕ ಡಾ.ಮಂತರ್ಗೌಡ ಮಾತನಾಡಿ ‘ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಅದನ್ನು ಬಗೆಹರಿಸಲಾಗುವುದು’ ಎಂದು ಭರವಸೆ ನೀಡಿದರು. ಜೊತೆಗೆ ಶಿಕ್ಷಕರೂ ಒಟ್ಟಾಗಿ ಹೋರಾಟ ನಡೆಸಬೇಕು. ತಮಗೆ ದೊರಕಬೇಕಾದ ಪ್ರತಿಯೊಂದು ಸವಲತ್ತು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಿವೃತ್ತರಾಗಿರುವ ಶಿಕ್ಷಕರಿಗೆ ಮತ್ತೆ ಪುನಃ ಅವಕಾಶ ಕಲ್ಪಿಸುವುದರ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ನಿವೃತ್ತಿ ಹೊಂದಿದವರು ಸಹ ಮತ್ತೆ ಅತಿಥಿ ಶಿಕ್ಷಕರಾಗಿ ಬೋಧಿಸಲು ಇಚ್ಛಿಸಿದರೆ ಅವರಿಗೆ ಅವಕಾಶ ಕಲ್ಪಿಸುವುದರ ಕುರಿತು ಅಧಿಕಾರಿಗಳಿಗೆ ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂದೂ ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.