ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ, ನೌಕರರ ಹಿತಕಾಯಲು ಸಂಘ ಬದ್ಧ: ರಾಜ್ಯಾಧ್ಯಕ್ಷ ಷಡಕ್ಷರಿ

ಕುಶಾಲನಗರದಲ್ಲಿ ನಡೆದ ರಾಜ್ಯ ಶೈಕ್ಷಣಿಕ ಕಾರ್ಯಾಗಾರ
Last Updated 14 ಫೆಬ್ರುವರಿ 2021, 4:04 IST
ಅಕ್ಷರ ಗಾತ್ರ

ಕುಶಾಲನಗರ: ‘ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ಶಿಕ್ಷಕರು ಸಹಕಾರ ಸಮನ್ವತೆ ಯೊಂದಿಗೆ ಸಾಗಿದರೆ ಯಾವುದೇ ಸಮಸ್ಯೆ ತಲೆದೋರುವು ದಿಲ್ಲ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಇಲ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ನೌಕರರ ಸಮ್ಮಿಲನ ಉದ್ಘಾಟಿಸಿ ಅವರು ಮಾತನಾಡಿದರು.

‘ವೀರಯೋಧರನ್ನು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರಂತ ಮಹಾನ್ ನಾಯಕರನ್ನು ದೇಶಕ್ಕೆ ವಿಶ್ವಕ್ಕೆ ನೀಡಿದ ಜಿಲ್ಲೆ ಕೊಡಗು. ಇಂಥ ನಾಡಿನಲ್ಲಿ ಸಮ್ಮೇಳನವನ್ನು ಆಯೋಜಿಸಿ ರಾಜ್ಯದ ಮೂಲೆ‌ ಮೂಲೆ ಸಂಘಟನೆಯ ಪದಾಧಿಕಾರಿಗಳನ್ನು ಕರೆಸಿ ಇಲ್ಲಿನ ಪ್ರವಾಸಿ ತಾಣಗಳನ್ನು ಪರಿಚಯ ಮಾಡಿ ಕೊಟ್ಟಿದ್ದಾರೆ. ಜೊತೆಗೆ ಉತ್ತಮವಾಗಿ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ’ ಎಂದರು.

‘ರಾಜ್ಯದಲ್ಲಿರುವ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಸರ್ಕಾರಿ ನೌಕರರ ಹಿತಕಾಯಲು ಸಂಘ ಬದ್ಧವಾಗಿದೆ. ಅವರ ಸರ್ವತೋಮುಖ ಅಭಿವೃದ್ಧಿಯೇ ಮೂಲ ಉದ್ದೇಶ. ಅದಕ್ಕಾಗಿ ಕ್ರಿಯಾಶೀಲತೆ, ದಕ್ಷತೆ ಹಾಗೂ ಪ್ರಾಮಾಣಿಕತೆಯೊಂದಿಗೆ ಬದಲಾವಣೆ ತಂದು ಕೆಲಸ‌ ಮಾಡುವುದೇ ಸಂಘಟನೆಯಾಗಿದೆ’ ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡಪ್ಪ ಪಾಟೀಲ ಮಾತನಾಡಿ, ‘ಎಲ್ಲ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಸಂಘಟನೆ ಮಾಡುತ್ತಿದೆ. ಅಲ್ಲದೇ ಅನ್ಯಾಯಕ್ಕೆ ಒಳಗಾದ ನೌಕರರ ಪರವಾಗಿ ಹೋರಾಟ ವನ್ನು ಮಾಡುತ್ತಿದೆ’ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಘಟಕದ ನಾಯಕರ ವಾಹನ ಚಾಲಕರನ್ನು ಸನ್ಮಾನಿಸಲಾಯಿತು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಗೌರವಾಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಗಿರಿಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಉಪಾಧ್ಯಕ್ಷರಾದ ಕೆ.ನಾಗೇಶ್, ಖಜಾಂಚಿ ಸುರೇಶ್ ಶಡಶ್ಯಾಳ, ಸಹಕಾರ್ಯದರ್ಶಿ ಎಚ್.ಎಸ್.ಚೇತನ್, ಸುಮತಿ, ಸಂಘಟನಾ ಕಾರ್ಯದರ್ಶಿ ನಾಗನಗೌಡ, ಪ್ರಮೀಳಾ ಕಾಮನಹಳ್ಳಿ, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಸನ್ಮಾನಕ್ಕೆ ಆದ್ಯತೆ: ವೇದಿಕೆಯಲ್ಲಿ 50ಕ್ಕೂ ಹೆಚ್ಚು ಮಂದಿ ಪದಾಧಿಕಾರಿಗಳಿಗೆ ಮತ್ತು ಬಿಇಒ, ದೈಹಿಕ ಶಿಕ್ಷಣ ಅಧೀಕ್ಷಕರಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ ಮಾಡಲು ಒಂದು ಗಂಟೆಗೂ ಹೆಚ್ಚು ಕಾಲ ಹಿಡಿಯಿತು.

ಗಮನಸೆಳೆದ ಮೆರವಣಿಗೆ: ಆಯೋಜಿಸಿದ್ದ ವರ್ಣರಂಜಿತ ‌ಮೆರವಣಿಗೆ ಎಲ್ಲರ ಗಮನ ಸೆಳೆಯಿತು.

ಪಟ್ಟಣದ ಟೋಲ್ ಗೇಟ್ ಬಳಿಯ ಕಾವೇರಿ ಪ್ರತಿಮೆಗೆ ಸಂಘದ ಪದಾಧಿಕಾರಿಗಳು ಹೂವಿನ ಹಾರ ಅರ್ಪಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ತೆರೆದ ವಾಹನದಲ್ಲಿ ರಾಜ್ಯ ಘಟಕದ ಪದಾಧಿಕಾರಿಗಳನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಯಿತು. ಮೆರವಣಿಯಲ್ಲಿ ವೀರಗಾಸೆ, ಪೂಜಾ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಮೆರುಗು ಹೆಚ್ಚಿಸಿದವು. ಶಿಕ್ಷಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ನೌಕರರ ಸಂಘ ನಿರ್ಲಕ್ಷ್ಯ– ಆರೋಪ: ‘ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲ್ಲೂಕು ಸರ್ಕಾರಿ ನೌಕರರ ಸಂಘವನ್ನು ಕಡೆಗಣಿಸಲಾಗಿದೆ’ ಎಂದು ಸಂಘದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಚಂದಾ ವಸೂಲಿಗಾಗಿ ನೌಕರರ ಸಂಘದ ಹೆಸರನ್ನು ಬಳಕೆ ಮಾಡಿಕೊಳ್ಳಲಾಗಿದೆ’ ಎಂದು ಹೆಸರು ಹೇಳಲು ಇಚ್ಛಿಸದ ಸಂಘದ ಮುಖಂಡರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT