ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರದ್ದಾಭಕ್ತಿಯಿಂದ ನಡೆದ ವಿಜಯ ವಿನಾಯಕ ದೇವಸ್ಥಾನದ ವಾರ್ಷಿಕೋತ್ಸವ

Published 28 ಮೇ 2024, 5:29 IST
Last Updated 28 ಮೇ 2024, 5:29 IST
ಅಕ್ಷರ ಗಾತ್ರ

ಶನಿವಾರಸಂತೆ: ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ ವಿಜಯ ವಿನಾಯಕ ದೇವಸ್ಥಾನದ 9ನೇ ವಾರ್ಷಿಕೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು.

ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ದೇವಸ್ಥಾನದಲ್ಲಿ ಪೂಜಾ ಮಹೋತ್ಸವ ನಡೆಯಿತು.

ಪ್ರಧಾನ ಅರ್ಚಕ ಮಂಜುನಾಥ ಶರ್ಮ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿದವು. ಗಂಗಾಪೂಜೆ, ಪ್ರಾರ್ಥನೆ, ಕಲಶಪೂಜೆ, ಪಂಚಾಮೃತ ಅಭಿಷೇಕಗಳು ನಡೆದವು. ನಂತರ, ಮಹಾಗಣಪತಿ ಹೋಮ ನೇರವೇರಿಸಿದ ಬಳಿಕ ವಿಜಯ ವಿನಾಯಕ ಸ್ವಾಮಿ ವಿಗ್ರಹಕ್ಕೆ 108 ಸಿಯಾಳಾಭಿಷೇಕ ನೆರವೇರಿಸಲಾಯಿತು.

ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದಲ್ಲಿ ಮಹಾಪೂಜೆಯನ್ನು ನೆರವೇರಿಸಲಾಯಿತು. ಸಂಜೆ 5 ಗಂಟೆಗೆ ಶ್ರೀ ವಿಜಯ ವಿನಾಯಕ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ದೇವಸ್ಥಾನದಿಂದ ವಾದ್ಯಗೋಷ್ಠಿ ಮೆರವಣಿಗೆ ಮೂಲಕ ಮುಖ್ಯರಸ್ತೆ ಮಾರ್ಗವಾಗಿ ಮಧ್ಯಪೇಟೆಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದವರೆಗೆ ತಲುಪಿ ನಂತರ ಅದೆ ಮಾರ್ಗವಾಗಿ ಮೂಲ ದೇವಸ್ಥಾನಕ್ಕೆ ಬರಲಾಯಿತು. ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ದೇವಸ್ಥಾನ ಸಮಿತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT