ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕರ ಪ್ರತಿಕೃತಿ ಸುಟ್ಟ ಪ್ರಕರಣ ಖಂಡನೀಯ: ಜಯೇಂದ್ರ

Published 24 ಜೂನ್ 2024, 5:04 IST
Last Updated 24 ಜೂನ್ 2024, 5:04 IST
ಅಕ್ಷರ ಗಾತ್ರ

ಸೋಮವಾರಪೇಟೆ: ‘ಇತ್ತೀಚೆಗೆ ವಿರಾಜಪೇಟೆ ಪಟ್ಟಣದಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣನವರ ಪ್ರತಿಕೃತಿ ದಯಿಸಿ ಜಿಲ್ಲೆಯ ಜನರು ತಲೆ ತಗ್ಗಿಸುವಂತೆ ಮಾಡಿದೆ’ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಈ. ಜಯೇಂದ್ರ ದೂರಿದ್ದಾರೆ.

‘25 ವರ್ಷಗಳ ಕಾಲ ಆಡಳಿತ ನಡೆಸಿರುವ ಬಿಜೆಪಿಯ ಕೊಡುಗೆ ಜಿಲ್ಲೆಯಲ್ಲಿ ಏನು ಇಲ್ಲ. ಒಂದು ವರ್ಷದಿಂದ ಭ್ರಷ್ಟಾಚಾರ ರಹಿತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಿಗುತ್ತಿರುವ ಜನಮನ್ನಣೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ, ಶಾಸಕರ ಪ್ರತಿಕೃತಿಯನ್ನು ದಹಿಸಿರುವುದು ಖಂಡನೀಯ. ಶಾಸಕರ ಅಭಿವೃದ್ಧಿ ಕೆಲಸಗಳನ್ನು ಜಿಲ್ಲೆಯ ಜನರು ಈಗಾಗಲೇ ಪಕ್ಷಾತೀತವಾಗಿ ಒಪ್ಪಿಕೊಂಡಿದ್ದಾರೆ. ರಾಜಕೀಯಾಗಿ ಸ್ಥಳೀಯ ಶಾಸಕರನ್ನು ಎದುರಿಸಲು ಆಗದೆ, ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜಿಲ್ಲೆಯ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT