ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ | ನೇಣು ಬಿಗಿದ ಸ್ಥಿತಿಯಲ್ಲಿ ಡಿಆರ್‌ಎಫ್‌ಓ ರಶ್ಮಿ ಮೃತದೇಹ ಪತ್ತೆ

Published 30 ಆಗಸ್ಟ್ 2023, 6:34 IST
Last Updated 30 ಆಗಸ್ಟ್ 2023, 6:34 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಅರಣ್ಯ ಇಲಾಖೆಯ ಸಂಶೋಧನಾ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ(27) ಎಂಬುವವರ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.

ಮಂಡ್ಯದವರಾದ ಅವರು ಕಳೆದ 2 ವರ್ಷಗಳಿಂದ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಅವರು ಒಬ್ಬರೇ ಇಲ್ಲಿನ ವಸತಿಗೃಹದಲ್ಲಿ ವಾಸವಿದ್ದರು. ಬುಧವಾರ ನೇಣು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಪ್ರಕರಣ ದಾಖಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT