ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಹಾಕಿ ಸ್ಟಿಕ್‌ ಹಿಡಿದು ಮೈದಾನಕ್ಕಿಳಿಯಲಿರುವ ಜಿಲ್ಲಾಧಿಕಾರಿ

Published 30 ಮಾರ್ಚ್ 2024, 4:31 IST
Last Updated 30 ಮಾರ್ಚ್ 2024, 4:31 IST
ಅಕ್ಷರ ಗಾತ್ರ

ಮಡಿಕೇರಿ: ಕೌಟುಂಬಿಕ ಹಾಕಿ ಉತ್ಸವದ ಉದ್ಘಾಟನಾ ಪಂದ್ಯದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆಡುವ ಮೂಲಕ ಉತ್ಸವಕ್ಕೆ ವಿಶೇಷ ರಂಗು ತುಂಬಲಿದ್ದಾರೆ. 17ರ ವಯೋಮಿತಿಯಲ್ಲಿ ಅವರು ಈ ಹಿಂದೆ ರಾಷ್ಟ್ರಮಟ್ಟದಲ್ಲಿ ಹಾಕಿ ಆಡಿದ್ದರು. ಹೀಗಾಗಿ, ಅವರು ಕೌಟುಂಬಿಕ ಹಾಕಿಯ ಉದ್ಘಾಟನಾ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತ ಎನಿಸಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ‘ಕೌಟುಂಬಿಕ ಹಾಕಿ ಉತ್ಸವದ ಆಯೋಜನಾ ಸಮಿತಿಯವರು ಕೂರ್ಗ್ 11 ತಂಡದಲ್ಲಿ ಆಡುವಂತೆ ಆಹ್ವಾನ ನೀಡಿದ್ದಾರೆ. ಈ ಕುರಿತು ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT