ಸೋಮವಾರಪೇಟೆ: ಸಜ್ಜಳ್ಳಿ ಹಾಡಿಯಲ್ಲಿನ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳ್ಳದ ಸ್ಥಳಕ್ಕೆ ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಶುಕ್ರವಾರ ಭೇಟಿ ನೀಡಿ ಮಾಹಿತಿ ಪಡೆದರು.

ಹಾಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮನೆ ಮತ್ತು ಹೊರಗೆ ಇರಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ದೂರಿದ ಕುರಿತು ‘ಪ್ರಜಾವಾಣಿ’ಯಲ್ಲಿ ಮೇ 25ರಂದು ವರದಿ ಪ್ರಕಟವಾಗಿತ್ತು.

ಕಾಡಾನೆಗಳು ಬ್ಯಾರಿಕೇಡ್ ದಾಟಿ ಬರುತ್ತಿವೆ. ಹಾಡಿಯಲ್ಲಿ ಶಿಥಿಲಾವಸ್ಥೆಯ ಮನೆಗಳಿದ್ದು, ಮಕ್ಕಳು, ವೃದ್ಧರು, ಮಹಿಳೆಯರು ಇದ್ದಾರೆ. ಜೀವಹಾನಿಯಾದರೆ ಏನು ಮಾಡುವುದು. ನಷ್ಟ ಪರಿಹಾರವನ್ನು ಸರ್ಕಾರದಿಂದ ಕೊಡಿಸಬೇಕೆಂದು ಜೇನು ಕುರುಬ ಯುವಸೇವಾ ಸಮಿತಿ ತಾಲ್ಲೂಕು ಅಧ್ಯಕ್ಷ ಜೆ.ಎ. ಶ್ಯಾಮ್ ಮನವಿ ಮಾಡಿದರು.

ಸಜ್ಜಳ್ಳಿ ಗಿರಿಜನರ ಹಾಡಿಯ ನಿವಾಸಿಗಳಿಗೆ ವ್ಯವಸಾಯ ಮಾಡಲು ಅರಣ್ಯ ಇಲಾಖೆಯಿಂದ ಹಕ್ಕುಪತ್ರ ನೀಡಲಾಗಿದೆ. ಈ ಕಾರಣದಿಂದ ನಷ್ಟಕ್ಕೊಳಗಾದವರಿಗೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ. ಜಾಗದ ಆರ್.ಟಿ.ಸಿ. ಇದ್ದರೆ ಮಾತ್ರ ಪರಿಹಾರ ನೀಡಲಾಗುತ್ತದೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಇಲಾಖೆ ಎಲ್ಲಾ ಮುಂಜಾಗೃತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಫ್ ಭರವಸೆ ನೀಡಿದರು.

ಬ್ಯಾರಿಕೇಡ್ ಉಳಿಕೆ ಕಾಮಗಾರಿಯನ್ನು ಕೂಡಲೇ ಪೂರೈಸಲಾಗುವುದು. ಬ್ಯಾರಿಕೇಡ್ ಎಲ್ಲಾ ಗೇಟ್‌ಗಳನ್ನು ಮುಚ್ಚಲಾಗುವುದು ಎಂದು ಅಧಿಕಾರಿ ಭರವಸೆ ನೀಡಿದರು.

ಮೇ.23 ಗುರುವಾರ ರಾತ್ರಿ ಸಜ್ಜಳ್ಳಿ ಹಾಡಿಯ ಒಳಗೆ ನುಗ್ಗಿದ ಜೋಡಿ ಕಾಡಾನೆಗಳು ಪ್ಲಾಸ್ಟಿಕ್ ಹೊದಿಕೆಯ ಮನೆಯನ್ನು ಹಾನಿಗೊಳಿಸಿತ್ತು. ಮನೆಯಲ್ಲಿದ್ದ ಕರಿಯಪ್ಪ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದರು. ಜೇನುಕುರುಬರ ಶಿವು ಎಂಬವರ ಬೈಕ್ ತುಳಿದು ಜಖಂಗೊಳಿಸಿತ್ತು. ಜೆ.ಎ.ಶ್ಯಾಮ್ ಎಂಬುವವರ ₹4 ಸಾವಿರ ಲೀಟರಿನ ವಾಟರ್ ಟ್ಯಾಂಕ್ ಒಡೆದು ಹಾಕಿವೆ. ರಾತ್ರಿಯಿಡಿ ಹಾಡಿಯಲ್ಲೇ ಠಿಕಾಣಿ ಹೂಡಿ ಜೇನುಕುರುಬರನ್ನು ನಿದ್ದೆಗೆಡಿಸಿದ್ದವು.

ಕಾಡಿಗೆ ಸುಮಾರು 7 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಿದ್ದು, ಎಲ್ಲೆಡೆ ಮುಚ್ಚಲಾಗಿದೆ. ಆದರೆ, ಸಜ್ಜಳ್ಳಿ ಹಾಡಿಯ ಬಳಿಯಲ್ಲಿ ಮಾತ್ರ ಗೇಟ್ ಬಿಟ್ಟಿರುವುದರಿಂದ ಇಲ್ಲಿಂದ ಕಾಡಾನೆಗಳು ಹೊರಗೆ ಬರಲು ಅವಕಾಶವಾಗಿದ್ದು ಸ್ಥಳೀಯರಿಗೆ ತೊಂದರೆಯಾಗಿದೆ. ಆನೆಗಳು ಇಲ್ಲಿಂದ ಹೊರಗೆ ಬಂದು ಮತ್ತೆ ಕಾಡಿಗೆ ಹಿಂದಿರುಗುತ್ತಿವೆ. ಮನೆಗಳ ಬಳಿಯಲ್ಲಿ ರಾತ್ರಿ ಆನೆಗಳು ಸಂಚರಿಸುವುದರಿಂದ ಮನೆಯಿಂದ ಹೊರಗೆ ಬರಲು ಹೆದರಿಕೆಯಾಗುತ್ತಿದೆ. ಮನೆಯ ಬಳಿಯಲ್ಲಿಯೇ ಕೆಲವೊಮ್ಮೆ ನಿಂತಿರುತ್ತವೆ. ಜೀವ ಹಾನಿಯಾಗುವ ಮುನ್ನ ಕಾಡಾನೆಗಳನ್ನು ನಿಯಂತ್ರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದರು.

ಕಾಫಿ ಬೆಳೆಗಾರರಾದ ಮಚ್ಚಂಡ ಅಶೋಕ್, ಕೆ.ಪಿ.ರಾಯ್, ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಕಾಡಾನೆ ಹಾವಳಿ, ಕೃಷಿ ಫಸಲು ಹಾನಿಯ ಬಗ್ಗೆ ತಿಳಿಸಿದರು. ರೈಲ್ವೆ ಬ್ಯಾರಿಗೇಡ್ ಕಾಮಗಾರಿ ಕಳಪೆಯಾದರೆ, ಕಾಡಾನೆಗಳು ಮುರಿದು ಬರುತ್ತವೆ. ಕಾಮಗಾರಿ ಕಳಪೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು. ಸಜ್ಜಳ್ಳಿ ಹಾಡಿಯ ಅಣ್ಣಯ್ಯ, ಸತೀಶ, ಶೇಷಪ್ಪ ಮತ್ತು ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.