ಮಡಿಕೇರಿ: ‘ಗೌತಮ ಬುದ್ಧನ ಸಂದೇಶಗಳು ಇಂದಿಗೂ ಸಹ ಪ್ರಸ್ತುತವಾಗಿದ್ದು, ಸ್ಫೂರ್ತಿದಾಯಕವಾಗಿದೆ’ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಲ್ಲಿನ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಬಾಳ್ವೆ, ಸೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಪಸರಿಸಿದ್ದಾರೆ. ಅವರ ಸಂದೇಶಗಳು ಇಡೀ ಮಾನವಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ‘ಯುದ್ಧದ ನಾಡಿನಿಂದ ಬಂದಿಲ್ಲ, ಬುದ್ಧನ ನಾಡಿನಿಂದ ಬಂದಿದ್ದೇನೆ’ ಎಂಬ ಸಂದೇಶ ಸಾರಿದ್ದರು ಎಂಬುದನ್ನು ಯಾರೂ ಮರೆಯುವಂತಿಲ್ಲ’ ಎಂದರು.

ಸಂತಕವಿ ಕನಕದಾಸ ಮತ್ತು ತತ್ವಪದಕಾರ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಡಾ.ಕೆ.ಎಚ್.ಮುಸ್ತಾಪ ಮಾತನಾಡಿ, ‘ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ, ಮಹಾನ್ ದಾರ್ಶನಿಕ, ಸಿದ್ದಾರ್ಥ ಎನ್ನುವ ರಾಜವಂಶದ ಕುಡಿಯಾಗಿದ್ದು, ಸಕಲ ವೈಭೋಗಗಳನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾರೆ’ ಎಂದರು.

ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಬುದ್ಧ ಬೋಧಿಸಿದ್ದಾರೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯ ದಿನವನ್ನು ಸ್ಮರಿಸಲು ಪ್ರತೀ ವರ್ಷ ಬುದ್ಧ ಪೂರ್ಣಿಮೆ ಆಚರಿಸಲಾಗುತ್ತದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಕೃಷ್ಣಪ್ಪ ಮಾತನಾಡಿ, ‘ಆಸೆಯೇ ದುಃಖಕ್ಕೆ ಮೂಲ ಎಂಬುದನ್ನು ಬುದ್ಧ ಸಾರಿದ್ದಾರೆ. ಸಾಮ್ರಾಟ್ ಅಶೋಕ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಬುದ್ಧನ ಶಾಂತಿ ಸಂದೇಶಗಳನ್ನು ಅನುಸರಿಸುತ್ತಾರೆ. ಶಾಂತಿ ದೂತರಾಗಿ ಕೆಲಸ ಮಾಡುತ್ತಾರೆ’ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, ‘ಗೌತಮ ಬುದ್ಧ ಮಹಾ ಬೆಳಕು, ಚೈತನ್ಯದ ಚಿಲುಮೆ ಎಂದರೆ ತಪ್ಪಾಗಲಾರದು. ಎಲ್ಲರನ್ನು ಪ್ರೀತಿಸಬೇಕು ಮತ್ತು ಗೌರವಿಸುವುದು ಆದ್ಯ ಕರ್ತವ್ಯವಾಗಿದೆ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಮಾತನಾಡಿ, ‘ಎಲ್ಲರೂ ಸಮಾನವಾಗಿ ಸಹೋದರತೆಯಿಂದ ಬದುಕು ನಡೆಸಬೇಕು ಎಂಬುದು ಗೌತಮ ಬುದ್ಧರ ಆಶಯವಾಗಿತ್ತು’ ಎಂದರು.

ಇಂದಿನ ಆಧುನಿಕ ಯುಗದಲ್ಲಿಯೂ ಸಹ ಜಾತಿ ವ್ಯವಸ್ಥೆ ಸರಿಯಲ್ಲ. ಕ್ರೀಡಾಕೂಟಗಳು ಸಹ ಜಾತಿಯಲ್ಲಿ ನಡೆಯುತ್ತಿರುವುದು ಬೇಸರದ ಸಂಗತಿ ಎಂದರು.

ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಹಾಗೂ ದಸಂಸ ಭೀಮವಾದ ಸಂಘಟನಾ ಸಂಚಾಲಕರಾದ ಕೆ.ಬಿ.ರಾಜು ಅವರು ಬುದ್ಧನ ಕುರಿತು ಹಾಡು ಹಾಡಿ ಗಮನ ಸೆಳೆದರು.

ನಗರಸಭೆ ಸದಸ್ಯ ಸತೀಶ್, ಡಿಎಸ್ಎಸ್ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಶಿಕ್ಷಕಿ ಉಷಾರಾಣಿ, ಪ್ರಮುಖರಾದ ಮಣಜೂರು ಮಂಜುನಾಥ್, ಪ್ರೇಮ್ ಕುಮಾರ್, ಎಸ್.ಕೆ.ಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.