ಮಡಿಕೇರಿ: ಕೊಡಗು ಜಿಲ್ಲೆಯಲ್ಲಿರುವ 58,765 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಕುಟುಂಬದ ಸದಸ್ಯರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ 9,066 ಅಲೆಮಾರಿ ಜನಸಂಖ್ಯೆ ಇದೆ. ಪರಿಶಿಷ್ಟ ಪಂಗಡದಲ್ಲಿ ಅಲೆಮಾರಿ 32,702 ಜನಸಂಖ್ಯೆ ಇದೆ. ಹಾಗೆಯೇ, ಆದಿವಾಸಿ ಬುಡಕಟ್ಟುಗಳಲ್ಲಿ 16,997 ಜನಸಂಖ್ಯೆ ಇದೆ ಎಂದು ಅವರು ಅಂಕಿ ಅಂಶ ನೀಡಿದರು.

ಅವರು ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಬಳಿಯ ಜೇನುಕುರುಬ ಮತ್ತು ಮೇದಾ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಪುನರ್ ವಸತಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಕುಂದುಕೊರತೆ ಆಲಿಸಿದ ವೇಳೆ ಮಾತನಾಡಿದರು.

ಬಳಿಕ ದಿಡ್ಡಳ್ಳಿ ಆದಿವಾಸಿಗಳು ವಾಸಿಸುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ದೊಡ್ಡಬೆಟ್ಟಗೇರಿಯಲ್ಲಿ ಸೋಲಿಗ ಕುಟುಂಬಗಳು ವಾಸಿಸುವ ಪ್ರದೇಶಕ್ಕೆ ಭೇಟಿ ನೀಡಿ ಅಲೆಮಾರಿ ಅಭಿವೃದ್ಧಿ ನಿಗಮದಿಂದ ನಡೆಸಲಾಗುತ್ತಿರುವ ಟೈಲರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಬಸವನಹಳ್ಳಿ ಬಳಿ ಬಿದಿರಿನ ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಸ್ಥಳೀಯರೊಬ್ಬರು ಮಾಹಿತಿ ನೀಡಿ ಬಹಳ ಹಿಂದಿನಿಂದಲೂ ಬಿದಿರಿನ ಉತ್ಪನ್ನಗಳಿಂದ ಹಲವು ಕರಕುಶಲ ವಸ್ತುಗಳನ್ನು ತಯಾರಿಸಿಕೊಂಡು ಬದುಕು ಕಟ್ಟಿಕೊಳ್ಳಲಾಗುತ್ತಿದೆ. ಇದೊಂದು ವೃತ್ತಿಯಾಗಿದ್ದು, ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಇಲ್ಲಿನ ಕೆಲವರು ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವವರು ಇದ್ದಾರೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಜಿ.ಪಲ್ಲವಿ ಅವರು, ಸರ್ಕಾರ ಮಹಿಳೆಯರ ಸ್ವಾವಲಂಬನೆಗೆ ಜಾರಿಗೊಳಿಸಿರುವ ಹಲವು ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಸರ್ಕಾರ ಅಲೆಮಾರಿ ಸಮುದಾಯಕ್ಕೆ ಆರ್ಥಿಕ ಬಲ ತುಂಬಲು ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ₹ 1 ಲಕ್ಷದವರೆಗೆ ಸಾಲ ನೀಡಲಿದ್ದು, ಶೇ 50ರಷ್ಟು ಸಹಾಯಧನ ಕಲ್ಪಿಸಲಾಗುತ್ತದೆ ಎಂದರು.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ₹ 2 ಲಕ್ಷದವರೆಗೂ ಸಾಲ ಸೌಲಭ್ಯ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ಸಾಗಾಣೆ ವಾಹನ, ಪ್ರವಾಸಿ ಟ್ಯಾಕ್ಸಿ ವಾಹನಗಳಿಗೆ ಶೇ 75ರಷ್ಟು ಸಹಾಯಧನ ಕಲ್ಪಿಸಲಾಗುತ್ತದೆ ಎಂದು ಹೇಳಿದರು. ಜೊತೆಗೆ, ಇನ್ನಿತರ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ದೊಡ್ಡಬೆಟ್ಟಗೇರಿಯ ಸೋಲಿಗ ಸಮುದಾಯ ಭವನಕ್ಕೆ ಭೇಟಿ ನೀಡಿ ಟೈಲರಿಂಗ್ ವೃತ್ತಿ ಮಾಡುತ್ತಿರುವ ಮಹಿಳೆಯರನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ವೃತ್ತಿ ಕೌಶಲ್ಯ ಬೆಳೆಸಿಕೊಂಡು ಜೀವನ ಮಟ್ಟ ಸುಧಾರಿಸಿಕೊಳ್ಳಲು ಮುಂದಾಗುತ್ತಿರುವುದು ಶ್ಲಾಘನೀಯ ಎಂದರು.

ಬಸವನಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಭೂಮಿ ಇಲ್ಲದವರಿಗೆ ಭೂಮಿ ಹಂಚಿಕೆ ಮಾಡಬೇಕು ಎಂದು ಸಾರ್ವಜನಿಕರು ಕೋರಿದರು.

ಬಳಿಕ, ಪೊನ್ನಂಪೇಟೆ ತಾಲ್ಲೂಕಿನ ಬೊಂಬುಕಾಡು ಕಾರೆಕಂಡಿ ಜೇನುಕುರುಬ ಹಾಡಿಗೆ ಭೇಟಿ ನೀಡಿ ಮಾಹಿತಿ ಪಡೆದರು. ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಆಸ್ತನಹಾಡಿ ಪರಿಶಿಷ್ಟ ಪಂಗಡದ ಕುರುಬ ಜನಾಂಗ ವಾಸಿಸುವ ಸ್ಥಳ ವೀಕ್ಷಿಸಿ ಮಾಹಿತಿ ಪಡೆದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ತಹಶೀಲ್ದಾರ್ಗಳಾದ ಕಿರಣ್ ಗೌರಯ್ಯ, ಮೋಹನ್ ಕುಮಾರ್, ಐಟಿಡಿಪಿ ಇಲಾಖೆ ಅಧಿಕಾರಿ ತೇಜಕುಮಾರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಪ್ರೀತಿ ಚಿಕ್ಕಮಾದಯ್ಯ , ಸಿದ್ದೇಗೌಡ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ ಭಾಗವಹಿಸಿದ್ದರು.

ಅಸಮರ್ಪಕ ಒಳಚರಂಡಿ ವ್ಯವಸ್ಥೆ ಬಗ್ಗೆ ಅಧ್ಯಕ್ಷೆ ಅಸಮಾಧಾನ.

ಕುಶಾಲನಗರ: ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅಲ್ಲಿನ ಅಸಮರ್ಪಕ ಒಳಚರಂಡಿ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಬಸವನಹಳ್ಳಿ ಗ್ರಾಮ ಗಿರಿಜನ ಮೇದ ಜನಾಂಗ ವಾಸಿಸುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಿಡ್ಡಳ್ಳಿ ನಿರಾಶ್ರಿತರ ಮನೆಗಳನ್ನು ವೀಕ್ಷಿಸಿದ ವೇಳೆ ಸ್ಥಳೀಯ ನಿವಾಸಿಗಳು ಅಸಮರ್ಪಕ ಒಳಚರಂಡಿ ಹಾಗೂ ಶಿಬಿರದಲ್ಲಿರುವ ಅಂಗನವಾಡಿ ಕೇಂದ್ರ ಆರಂಭಿಸದಿರುವ ಬಗ್ಗೆ ದೂರ ನೀಡಿದರು. ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿದ ಅವರು ಕೂಡಲೇ ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಅಂಗನವಾಡಿ ಕೇಂದ್ರ ತೆರಯಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೇದ ಜನಾಂಗದವರು ವಾಸಿಸುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರು ತಯಾರಿಸಿದ ಬಿದುರಿನ ಕರಕುಶಲ ಉತ್ಪನ್ನಗಳನ್ನು ಪರಿಶೀಲಿಸಿದರು. ಸದರಿ ಚಟುವಟಿಕೆಗಳಿಗೆ ಸರ್ಕಾರದಿಂದ ಪಡೆಯುತ್ತಿರುವ ಸವಲತ್ತುಗಳ ಬಗ್ಗೆ ಮಾರ್ಗದರ್ಶನ ನೀಡಿದರು. ನಂತರ ದೊಡ್ಡಬೆಟ್ಟಗೇರಿ ಗ್ರಾಮದಲ್ಲಿ ಸೋಲಿಗ ಜನಾಂಗದವರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಹೋಲಿಕೆ ತರಬೇತಿ ಕಾರ್ಯಾಗಾರ ವೀಕ್ಷಿಸಿ ಮಾಹಿತಿ ಪಡೆದುಕೊಂಡರು.

ಸದರಿ ತರಬೇತಿಯ ನಂತರ ಸ್ವಉದ್ಯೋಗ ಕೈಗೊಳ್ಳಲು ಸರ್ಕಾರದಿಂದ ಸಿಗುವ ವಿವಿಧ ಸಾಲಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಗುಡ್ಡೆ ಹೊಸೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.