ನಾಪೋಕ್ಲು: ಸಮೀಪದ ಚೆರಿಯಪರಂಬುವಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

‘ಅತಿವೃಷ್ಟಿಯಿಂದ ಜಲಾವೃತವಾಗುವ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ₹1.89 ಲಕ್ಷ ವೆಚ್ಚದಲ್ಲಿ ಮಳೆಗಾಲ ಮುಗಿದ ನಂತರ ರಸ್ತೆ ಎತ್ತರಿಸುವ ಕಾಮಗಾರಿ ಕೈಗೊಳ್ಳಲಾಗುವುದು. ಮುಂದಿನ ವರ್ಷ ಯಾವುದೇ ಸಮಸ್ಯೆ ಉದ್ಭವಿಸದು. ಕಳಪೆ ಕಾಮಗಾರಿ ಬಗ್ಗೆ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ‘ತಜ್ಞರು, ಎಂಜಿನಿಯರ್ಗಳು ಪರಿಶೀಲಿಸಿ ಗುಣಮಟ್ಟದ ರಸ್ತೆ ನಿರ್ಮಿಸಲಾಗುವುದು. ಕಳೆದ ಬಾರಿ ಕುಸಿತವಾಗಿದ್ದ ಕುಟ್ಟ ಮತ್ತು ಕೆದ ಮುಳ್ಳೂರು ಭಾಗದ ರಸ್ತೆಗಳನ್ನು ಪುನರ್ ನಿರ್ಮಿಸಲಾಗಿದೆ. ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ರಮೇಶ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷೆ
ವನಜಾಕ್ಷಿ ರೇಣುಕೇಶ್, ಮಾಜಿ ಉಪಾಧ್ಯಕ್ಷೆ ಕುಲೇಟಿರ ಹೇಮಾ ಅರುಣ್ ಬೇಬ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾರ್ಮಿಕ ಘಟಕದ ಉಪಾಧ್ಯಕ್ಷ ಪರವಂಡ ಸಿರಾಜ್, ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯಾಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಪಿಡಿಒ ಚೋಂ೦ದಕ್ಕಿ, ಯುವ ಕಾಂಗ್ರೆಸ್ ಮುಖಂಡ ಚೆರುಮಂದಂಡ ಸೋಮಣ್ಣ, ಕಂದಾಯ ಪರಿವೀಕ್ಷಕ ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.