ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಪೋಕ್ಲು: ಹರ್ ಘರ್ ತಿರಂಗಾ ಸಂಭ್ರಮ

ಜಿಲ್ಲೆಯ ವಿವಿಧೆಡೆ ಕಾಲ್ನಡಿಗೆ ಜಾಥಾ; ಜಾಗೃತಿ ಕಾರ್ಯಕ್ರಮ
Published 14 ಆಗಸ್ಟ್ 2024, 14:39 IST
Last Updated 14 ಆಗಸ್ಟ್ 2024, 14:39 IST
ಅಕ್ಷರ ಗಾತ್ರ

ನಾಪೋಕ್ಲು: ಎಮ್ಮೆಮಾಡು ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳೊಂದಿಗೆ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.

ಹರ್ ಘರ್ ತಿರಂಗಾದ ಮಹತ್ವವನ್ನು ಸಾರುತ್ತಾ ಫ್ರೌಡ ಶಾಲೆ ಮೈದಾನದಿಂದ ಎಮ್ಮೆಮಾಡು ಪಟ್ಟಣದ ಮೂಲಕ ಗ್ರಾಮ ಪಂಚಾಯಿತಿವರೆಗೆ ಜಾಥಾ ನಡೆಯಿತು. ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಪಂಚಾಯಿತಿ ಸದಸ್ಯರಾದ ಚಕ್ಕೇರ ಇಸ್ಮಾಯಿಲ್, ಗಫೂರ್ ಪಡಿಯಾಣಿ, ಯೂಸೂಫ್.ಟಿ.ಕೆ ರಾಷ್ಟ್ರಭಕ್ತಿಯ ಬಗ್ಗೆ ಸಂದೇಶ ಭಾಷಣ ಮಾಡಿದರು.

ಉಪಾಧ್ಯಕ್ಷೆ ಚಂಬಾರಂಡ ಐಸಮ್ಮ ಮತ್ತು ಸದಸ್ಯರಾದ ಆಯಿಷ, ಕಂಬೇರ ಅಬ್ಸತ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಪ್ರಸನ್ನ ಕುಮಾರ್, ಎಮ್ಮೆಮಾಡು ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ ಪಾಲ್ಗೊಂಡಿದ್ದರು.

ಬಲ್ಲಮಾವಟಿ ಗ್ರಾಮ ಪಂಚಾಯಿತಿ ಮತ್ತು ನೇತಾಜಿ ಪ್ರೌಢಶಾಲೆಯ ಸಹಯೋಗದಲ್ಲಿ ಸಮೀಪದ ಪೇರೂರು ಗ್ರಾಮದ ಅಮೃತ ಸರೋವರದ ಬಳಿ ಪ್ರಭಾತ್ ಭೇರಿ ನಡೆಸಲಾಯಿತು. ಇಲ್ಲಿನ ಸರೋವರದ ಬಳಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಡಲಾಯಿತು. ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕ ಮಹಬೂಬ್, ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ, ಪಿಡಿಒ ಪೂಣಚ್ಚ, ಕಚೇರಿ ಸಹಾಯಕಿ ಜ್ಯೋತಿ ಪಾಲ್ಗೊಂಡಿದ್ದರು.

ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಬುಧವಾರ ನಡೆದ ಹರ್ ಘರ್ ತಿರಂಗಾ ಅಭಿಯಾನದಲ್ಲಿ ನೇತಾಜಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಪಾಲ್ಗೊಂಡಿದ್ದರು
ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಬುಧವಾರ ನಡೆದ ಹರ್ ಘರ್ ತಿರಂಗಾ ಅಭಿಯಾನದಲ್ಲಿ ನೇತಾಜಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT