ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ‍್ರಜಾವಾಣಿ’ ವರದಿಗೆ ಸ್ಪಂದನೆ: ವಿವರಣೆ ಕೇಳಿದ ಸಫಾಯಿ ಕರ್ಮಚಾರಿ ಆಯೋಗ

Published 1 ಅಕ್ಟೋಬರ್ 2023, 17:21 IST
Last Updated 1 ಅಕ್ಟೋಬರ್ 2023, 17:21 IST
ಅಕ್ಷರ ಗಾತ್ರ

ಮಡಿಕೇರಿ: ಪೌರ ಕಾರ್ಮಿಕರ ದಿನಾಚರಣೆಯಂದು ಮಡಿಕೇರಿ ನಗರಸಭೆಯ ಪೌರಕಾರ್ಮಿಕರಿಗೆ 12 ವರ್ಷಗಳಿಂದ ಮನೆ ಮಂಜೂರಾಗದಿರುವ ಕುರಿತು ‘ಪ್ರಜಾವಾಣಿ’ ಪ್ರಕಟಿಸಿದ್ದ ‘12 ವರ್ಷ ಕಳೆದರೂ ಸಿಗದ ಸೂರು’ ವಿಶೇಷ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಈ ಕುರಿತು ವಿವರಣೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ಅವರನ್ನು ಕೇಳಿದೆ.

ಈ ಕುರಿತು ನಗರಸಭೆ ಪೌರಾಯುಕ್ತ ವಿಜಯ್ ಅವರು ಪೌರಕಾರ್ಮಿಕರ ಮನೆ ನಿರ್ಮಾಣಕ್ಕಾಗಿ 2 ಬಾರಿ ಟೆಂಡರ್‌ ಕರೆದರೂ ಒಬ್ಬರೇ ಭಾಗವಹಿಸಿದ್ದರಿಂದ ಕೌನ್ಸಿಲ್ ಒಪ್ಪಿಗೆ ಪಡೆದು ಸಕ್ಷಮ ಪ್ರಾಧಿಕಾರ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆತ ಕೂಡಲೇ ಟೆಂಡರ್‌ದಾರರಿಗೆ ಕಾರ್ಯಾದೇಶ ನೀಡಿ ಅನುಷ್ಠಾನಗೊಳಿಸಲಾಗುವುದು ಎಂದು ವರದಿ ನೀಡಿದ್ದಾರೆ.

ಈ ವರದಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ಅವರು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT