ಶನಿವಾರ, ಏಪ್ರಿಲ್ 17, 2021
27 °C

ಕೊಡಗು: ಹುಲಿ ದಾಳಿಗೆ 2ನೇ ಬಲಿ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆ ಆರಂಭ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೊನ್ನಂಪೇಟೆ (ಕೊಡಗು): ಜಿಲ್ಲೆಯ ಶ್ರೀಮಂಗಲ ಸಮೀಪದ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ 2ನೇ ಬಲಿಯಾಗಿದೆ.

ಸೋಮಣ್ಣ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ. ಶನಿವಾರ ಸಂಜೆ ಇದೇ ಸ್ಥಳದ ಆಸುಪಾಸಿನಲ್ಲಿ ವಿದ್ಯಾರ್ಥಿ ಅಯ್ಯಪ್ಪ ಎಂಬಾತ ಹುಲಿ ದಾಳಿಯಿಂದ ಮೃತಪಟ್ಟಿದ್ದ. ಎರಡು ದಿನದಲ್ಲಿ ಇಬ್ಬರು ಹುಲಿ ದಾಳಿಯಿಂದ ಮೃತಪಟ್ಟಿದ್ದು ಬೆಳೆಗಾರರು, ಕಾರ್ಮಿಕರಲ್ಲಿ ಆತಂಕ ಮತ್ತಷ್ಟು ಹೆಚ್ಚಿದೆ. 

‘ಕಳೆದ ಐದು ತಿಂಗಳಿಂದ ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಿದ್ದ ಹುಲಿಯು ಈಗ ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ. ಈ ಹಿಂದೆಯೇ ಈ ಹುಲಿಯನ್ನು ಸೆರೆ ಹಿಡಿಯಬೇಕಿತ್ತು. ಅರಣ್ಯ ಇಲಾಖೆಯವರ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ’ ಎಂದು ಸ್ಥಳೀಯರು ಆರೋಪಿಸಿ ಪ್ರತಿಭಟನೆ ನಡೆಸಿದರು. ರೈತರು ಸಂಘದ ಕಾರ್ಯಕರ್ತರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.  

ಕಾರ್ಯಾಚರಣೆ ಆರಂಭ: ಸ್ಥಳಕ್ಕೆ ಬಂದಿರುವ ಅರಣ್ಯ ಇಲಾಖೆ ಸಿಬ್ಬಂದಿ, ಮತ್ತಿಗೋಡು ಶಿಬಿರದ ಸಾಕಾನೆ ಬಳಸಿಕೊಂಡು ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಭಿಮನ್ಯು ಹಾಗೂ ಬಾಲಕೃಷ್ಣ ಎಂಬ ಎರಡು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಬೋನ್‌ ಸಹ ಇಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು