ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಬೆಳ್ಳಿ ಚೆಂಬು ಕದ್ದ ಆರೋಪಿ ಬಂಧನ

Published 17 ಜನವರಿ 2024, 6:14 IST
Last Updated 17 ಜನವರಿ 2024, 6:14 IST
ಅಕ್ಷರ ಗಾತ್ರ

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಸಮೀಪದ ಮನೆಯೊಂದರಲ್ಲಿ ಬೆಳ್ಳಿ ಚೆಂಬು, ಮೊಬೈಲ್ ಹಾಗೂ ವಾಚ್‌ ಅನ್ನು ಕಳವು ಮಾಡಿದ್ದ ಆರೋಪಿ ವೀರೇಶ್‌ಕುಮಾರ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ತನಿಖೆ ಕೈಗೊಂಡಾಗ ಈತನ ವಿರುದ್ಧ ಕೊಡಗು ಜಿಲ್ಲೆಯಲ್ಲಿ ಬರೋಬರಿ 9 ಕಳವು ಪ್ರಕರಣಗಳು ದಾಖಲಾಗಿದ್ದು ಪತ್ತೆಯಾಗಿದೆ.

ಈತನ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ 3, ಕುಟ್ಟ ಹಾಗೂ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ 2, ಕುಶಾಲನಗರ ನಗರ ಹಾಗೂ ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದೊಂದು ಕಳವು ಪ್ರಕರಣಗಳು ದಾಖಲಾಗಿವೆ.

ಆರೋಪಿಯು ಕೊಡಗರಹಳ್ಳಿ ನಿವಾಸಿ ಬಿ.ಸಿ.ತಿಮ್ಮಯ್ಯ ಅವರ ಕೂರ್ಗ್‌ಹಳ್ಳಿ ಎಸ್ಟೇಟ್‌ನಲ್ಲಿ ಜ. 7ರಂದು ಬೀಗ ಮುರಿದು ಬೀರುವಿನಲ್ಲಿದ್ದ ಬೆಳ್ಳಿ ಚೆಂಬು, ಮೊಬೈಲ್ ಹಾಗೂ ವಾಚ್‌ನ್ನು ಕಳವು ಮಾಡಿದ್ದ. ಇದೇ ರೀತಿ ಪ್ರಕರಣಗಳು ಜಿಲ್ಲೆಯ ಹಲವೆಡೆ ದಾಖಲಾಗಿದ್ದುದ್ದನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಆರೋಪಿಯ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು.

ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಸಿಪಿಐ ಕೆ.ರಾಜೇಶ್, ಸುಂಟಿಕೊಪ್ಪದ ಪಿಎಸ್‌ಐ ಎಂ.ಸಿ.ಶ್ರೀಧರ್ ನೇತೃತ್ವದ ತಂಡ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಫಲವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಅನುಮಾನಾಸ್ಪ‍ದ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ತುರ್ತು ಸಹಾಯವಾಣಿ 112 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೆ.ರಾಮರಾಜನ್ ಮನವಿ ಮಾಡಿದ್ದಾರೆ.

ಕುಶಾಲನಗರ; ಮನೆಯ ಬೀಗ ಮುರಿದು ₹ 1.09 ಲಕ್ಷ ಮೌಲ್ಯದ ಚಿನ್ನ ಕಳವು

ಮಡಿಕೇರಿ: ಕುಶಾಲನಗರದ ಆರ್‌ಆರ್‌ಆರ್‌ ಬಡಾವಣೆಯ ನಿವಾಸಿಯೊಬ್ಬರ ಮನೆಯ ಬೀಗ ಮುರಿದು ಮನೆಯಲ್ಲಿದ್ದ ₹ 1.09 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ಕಳವು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT