ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಮೂರು ದಿನ ಮೀನು, ಮಾಂಸ ಮಾರಾಟಕ್ಕೆ ಅವಕಾಶ 

Last Updated 12 ಏಪ್ರಿಲ್ 2020, 5:13 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊನೆಗೂ ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಕಳೆದ ಇಪ್ಪತ್ತು ದಿನಗಳಿಂದ ಮೀನು ಹಾಗೂ ಮಾಂಸ ಮಾರಾಟ ಬಂದ್ ಮಾಡಲಾಗಿತ್ತು.

ಜಿಲ್ಲೆಯಲ್ಲಿರುವ ಎಲ್ಲಾ ಮೀನು, ಮೊಟ್ಟೆ ಮತ್ತು ಮಾಂಸದ ಅಂಗಡಿಯನ್ನು ಸೋಮವಾರದಿಂದ (ಏಪ್ರಿಲ್ 13) ವಾರದ ಮೂರು ದಿನ ತೆರೆಯುವಂತೆ ಜಿಲ್ಲಾಡಳಿತ ಆದೇಶಿಸಿದೆ.

ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕುರಿ, ಕೋಳಿ, ಹಂದಿ ಮಾಂಸ ಮತ್ತು ಸ್ಥಳೀಯ ಮೀನುಗಳನ್ನು ಮಾತ್ರ ಪ್ರಸ್ತುತ ಜಾರಿಯಲ್ಲಿರುವಂತೆ ವಾರದಲ್ಲಿ 3 ದಿನ (ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಾತ್ರ) ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮೀನು, ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿ ಶುಚಿತ್ವವನ್ನು ಕಾಪಾಡಲು ಮತ್ತು ಗ್ರಾಹಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಖರೀದಿ ಮಾಡಬೇಕು.

ನಗರಸಭೆ, ಪಟ್ಟಣ ಪಂಚಾಯಿತಿಗಳು ಮತ್ತು ಗ್ರಾಮ ಪಂಚಾಯಿತಿಗಳು ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಕೊಡಗಿಗೆ ಮೈಸೂರು ಕಡೆಯಿಂದ ಕುರಿ ಹಾಗೂ‌ ಕೋಳಿ, ಮಂಗಳೂರು- ಕೇರಳ ಕಡೆಯಿಂದ ಮೀನು‌ ಪೂರೈಕೆ ‌ಆಗುತ್ತಿತ್ತು. ಆ ಭಾಗದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಿರುವ ಕಾರಣಕ್ಕೆ ಕೊಡಗಿಗೆ ಕೋಳಿ ಹಾಗೂ ಮೀನು‌ ತರುವುದನ್ನು ನಿರ್ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT