ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ. 13ರಿಂದ ಮೂರು ದಿನ ಉದ್ಯೋಗ ಮೇಳ

ಬೃಹತ್ ಕಂಪನಿಗಳಿಂದ ನಡೆಯಲಿದೆ ನೇಮಕಾತಿ; ಅರ್ಜಿ ಅಲ್ಲಿಸಲು ಸೂಚನೆ
Last Updated 30 ನವೆಂಬರ್ 2022, 10:50 IST
ಅಕ್ಷರ ಗಾತ್ರ

ಮಡಿಕೇರಿ:ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯಲ್ಲಿ ಡಿ. 13, 16 ಹಾಗೂ 20ರಂದು ಉದ್ಯೋಗ ಮೇಳ ನಡೆಸಲು ಇಲ್ಲಿ ಮಂಗಳವಾರ ನಡೆದ ಸಭೆ ನಿರ್ಧರಿಸಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ಡಿ. 13ರಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, 16ರಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ 20ರಂದು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗು ತ್ತಿದೆ. ಕಾಲೇಜಿನ ಪ್ರಾಂಶುಪಾಲರ ಜೊತೆ ಸಮನ್ವಯ ಸಾಧಿಸಿ ಮೇಳದ ಯಶಸ್ಸಿಗೆ ಕೈಜೋಡಿ ಸಬೇಕು ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿಯನ್ನೂ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ‘ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿ ಗಳ ನೋಂದಣಿ ಮಾಡಬೇಕು, ಉದ್ಯೋ ಗದಾತರ ನಿಖರ ಮಾಹಿತಿಯನ್ನು ಒದಗಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಅಧಿಕಾರಿ ಉಮಾ ಮಾತನಾಡಿ, www.koushalkar.com ವೆಬ್‍ಪೋರ್ಟಲ್‍ನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಯುಸಿ, ಡಿಪ್ಲೊಮಾ, ಐಟಿಐ, ಎಸ್ಸೆಸ್ಸೆಲ್ಸಿ ಓದಿದ 8,753 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ನೋಂದಣಿಯಾಗಿರುವ ಉದ್ಯೋಗ ಆಕಾಂಕ್ಷಿಗಳಿಗೆ ಬಲ್ಕ್ ಎಸ್‍ಎಂಎಸ್ ಮುಖಾಂತರ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗುವುದು ಎಂದರು.

ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾಗಣಪತಿ, ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ಎಚ್.ಜೆ.ರೂಪ, ಜಿಲ್ಲಾ ಸಂಯೋಜಕ ಎನ್.ಆರ್.ರವಿಕುಮಾರ್, ಡಿವೈಎಸ್‍ಪಿ ಗಜೇಂದ್ರಪ್ರಸಾದ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೀಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಶಿವಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಶ್ರೀಕಂಠಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಸಾಂಖ್ಯಿಕ ಅಧಿಕಾರಿ ನಾರಾಯಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT