ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು | ಹುಲಿ ದಾಳಿಗೆ ಹಸು ಸಾವು

Published 5 ಮಾರ್ಚ್ 2024, 13:44 IST
Last Updated 5 ಮಾರ್ಚ್ 2024, 13:44 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಟಿ.ಶೆಟ್ಟಿಗೇರಿ ಬಳಿಯ ತಾವಳಗೇರಿಯಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆ ವೇಳೆಯಲ್ಲಿ ಗದ್ದೆ ಬಯಲಿಗೆ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

ಹುಲಿ ಹಸುವಿನ ಕುತ್ತಿಗೆ ಕಚ್ಚಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸತ್ತಿದೆ ಎಂದು ಮಾಲೀಕ ತಡಿಯಂಗಡ ಕರುಂಬಯ್ಯ ಹೇಳಿದ್ದಾರೆ.

ಸ್ಥಳಕ್ಕೆ ಪೊನ್ನಂಪೇಟೆ ಅರಣ್ಯ ಅಧಿಕಾರಿ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳೀಯರ ಆಕ್ರೋಶ: ‘ಪೊನ್ನಂಪೇಟೆ ತಾಲ್ಲೂಕಿನಾದ್ಯಂತ ಹುಲಿಗಳು ದಾಳಿ ಮಾಡಿ ಜಾನುವಾರುಗಳನ್ನು ಕೊಂದು ಹಾಕುತ್ತಿವೆ. ಅರಣ್ಯ ಇಲಾಖೆ ಇದರ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಇದರಿಂದ ಕೃಷಿಕರು ಸಂಕಷ್ಟ ಎದುರಿಸುವಂತಾಗಿದೆ. ಈಗಲಾದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಜಾನುವಾರುಗಳನ್ನು ಸಂರಕ್ಷಿಸಲಿ’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT